ತುಮಕೂರಿನಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು, ಮೂವರ ಸ್ಥಿತಿ ಗಂಭೀರ
ಅತಿ ವೇಗವಾಗಿ ಬಂದ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಇನ್ನೊಂದು ರಸ್ತೆಗೆ ಚಲಿಸಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ

Published On :
ತುಮಕೂರು: ಅತಿ ವೇಗವಾಗಿ ಬಂದ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಇನ್ನೊಂದು ರಸ್ತೆಗೆ ಚಲಿಸಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಇತರ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ನಗರ ಠಾಣಾ ವ್ಯಾಪ್ತಿಯ ಶಿವಾಜಿನಗರದಲ್ಲಿ ನಡೆದಿದೆ.
ಮೃತಪಟ್ಟವರನ್ನು ರಾಘವೇಂದ್ರ ಜೋಶಿ (40) ಹಾಗೂ ಶ್ಯಾಮ (35) ಎಂದು ಗುರುತಿಸಲಾಗಿದೆ.
ಹಿರಿಯೂರು ಕಡೆಯಿಂದ ಶಿರಾ ನಗರಕ್ಕೆ ಆಗಮಿಸುತ್ತಿದ್ದ ಕಾರು ಶಿರಾದ ಪ್ರವಾಸಿ ಮಂದಿರ ಮುಂಭಾಗವಿರುವ ಬೈಪಾಸ್ ಬಳಿ ಅತಿ ವೇಗವಾಗಿ ಬಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಮಾತ್ರವಲ್ಲ ರಸ್ತೆ ವಿಭಜಕ ದಾಟಿ ಮತ್ತೊಂದು ರಸ್ತೆಗೆ ಬಂದು ಅಲ್ಲಿ ಎದುರುಗಡೆಯಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ.
ಹಿರಿಯೂರು ಕಡೆಯಿಂದ ಬರುತ್ತಿದ್ದ ಕಾರಿನಲ್ಲಿದ್ದ ನಾಲ್ಕು ಜನರಲ್ಲಿ ರಾಘವೇಂದ್ರ ಜೋಶಿ (40) ಎಂಬವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇವರು ಬೆಂಗಳೂರಿನ ಕಿರ್ಲೋಸ್ಕರ್ ಕಂಪೆನಿಯಲ್ಲಿ ಜನರಲ್ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಅವರ ಬಳಿ ಪತ್ತೆಯಾಗಿರುವ ಗುರುತಿನ ಚೀಟಿಯಿಂದ ತಿಳಿದು ಬಂದಿದೆ.
ಅದೇ ಕಾರಿನಲ್ಲಿದ್ದ ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಈ ಪೈಕಿ ಶೇಖರ್ ಗಾಳಿ ಮತ್ತು ಶ್ರೀಪತಿ ಎಂಬುವರ ಸ್ಥಿತಿ ಗಂಭೀರವಾಗಿದೆ. ಮತ್ತೊಂದು ಕಾರು ಬೆಂಗಳೂರಿನಿಂದ ಶಿರಾ ನಗರಕ್ಕೆ ಆಗಮಿಸಿ ಅಲ್ಲಿಂದ ಹಿರಿಯೂರು ಕಡೆ ಹೊರಟಿತ್ತು. ಅದರಲ್ಲಿದ್ದ ಶ್ಯಾಮ (35 ) ಎಂಬವರು ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಡಿವೈಎಸ್ಪಿ ವೆಂಕಟೇಶ್ ಸ್ವಾಮಿ, ಶಿರಾ ನಗರ ಠಾಣೆಯ ಇನ್ಸ್ ಪೆಕ್ಟರ್ ರಂಗಸ್ವಾಮಿ ಅವರು ಭೇಟಿ ಪರಿಶೀಲನೆ ನಡೆಸಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


