ರಾಜ್ಯ

ಬೆಳಗಾವಿ: ಪ್ರವಾಹದಲ್ಲಿ ಕೊಚ್ಚಿಹೋದ ಕಾರು, ನಾಲ್ವರು ನೀರು ಪಾಲಾಗಿರುವ ಶಂಕೆ

ಬೆಳಗಾವಿ ತಾಲೂಕಿನ ಸಂತಿಬಸ್ತವಾಡ್ ಗ್ರಾಮದಲ್ಲಿ ತುಂಬಿ ಹರಿಯುತ್ತಿದ್ದ ಸೇತುವೆ ದಾಟುತ್ತಿದ್ದ ಕಾರೊಂದು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಕಾರಿನಲ್ಲಿದ್ದ ಮೂರು...

ಬೆಳಗಾವಿ: ಪ್ರವಾಹದಲ್ಲಿ ಕೊಚ್ಚಿಹೋದ ಕಾರು, ನಾಲ್ವರು ನೀರು ಪಾಲಾಗಿರುವ ಶಂಕೆ
ತುಂಬಿ ಹರಿಯುತ್ತಿರುವ ಸೇತುವೆ
Published On :
ಬೆಳಗಾವಿ: ಬೆಳಗಾವಿ ತಾಲೂಕಿನ ಸಂತಿಬಸ್ತವಾಡ್ ಗ್ರಾಮದಲ್ಲಿ ತುಂಬಿ ಹರಿಯುತ್ತಿದ್ದ ಸೇತುವೆ ದಾಟುತ್ತಿದ್ದ ಕಾರೊಂದು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಕಾರಿನಲ್ಲಿದ್ದ ಮೂರು ಅಥವಾ ನಾಲ್ಕು ಮಂದಿ ನೀರು ಪಾಲಾಗಿರುವ ಶಂಕೆ ವ್ಯಕ್ತವಾಗಿದೆ.
ಕಾರಿನಲ್ಲಿದ್ದ ವ್ಯಕ್ತಿಗಳ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದರೆ ಪ್ರತ್ಯಕ್ಷದರ್ಶಿಗಳ ಪ್ರಕಾರ, ಸಂತಿಬಸ್ತವಾಡ್ ಗ್ರಾಮದ ನಿವಾಸಿಗಳು ಕಪ್ಪು ಬಣ್ಣದ ಕಾರಿನಲ್ಲಿ ತುಂಬಿ ಹರಿಯುತ್ತಿದ್ದ ಸೇತುವೆ ದಾಟಲು ಯತ್ನಿಸಿದರು. ಕಾರಿನ ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆಯಿಂದ ಕೆಳಗೆ ಬಿದ್ದು, ಕೊಚ್ಚಿಕೊಂಡು ಹೋಗಿದೆ. 
ಸೇತುವೆ ದಾಟದಂತೆ ಸ್ಥಳೀಯರು ಕಾರು ಚಾಲಕನಿಗೆ ಎಚ್ಚರಿಸಿದ್ದರು. ಆದರೆ ಕಾರು ಚಾಲಕ ಎಚ್ಚರಿಕೆಯನ್ನು ಕಡೆಗಣಿಸಿ ಸೇತುವೆ ದಾಟಲು ಯತ್ನಿಸಿದ ಪರಿಣಾಮ ಅವರು ಕಾರು ಸಮೇತ ಕೊಚ್ಚಿ ಹೋಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಈ ಸಂಬಂಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಗ್ನಿ ಶಾಮಕ ಸಿಬ್ಬಂದಿ ವಾಹನ ಹಾಗೂ ವ್ಯಕ್ತಿಗಳ ಶೋಧ ಕಾರ್ಯ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.