ರಾಜ್ಯ

ಮಳೆ, ಪ್ರವಾಹದಿಂದ ತತ್ತರಿಸಿದ ಉತ್ತರ ಕರ್ನಾಟಕ: ರಾಜ್ಯಕ್ಕೆ ಕೇಂದ್ರದ ನೆರವಿನ ಅಭಯ

ಉತ್ತರ ಕರ್ನಾಟಕ ಮತ್ತು ಕರಾವಳಿ ಸೇರಿದಂತೆ ರಾಜ್ಯದ 15 ಜಿಲ್ಲೆಗಳಲ್ಲಿ ಭಾರಿ ಮಳೆ, ಪ್ರವಾಹದ ಪರಿಸ್ಥಿತಿ ನಿಭಾಯಿಸಲು ರಾಜ್ಯಕ್ಕೆ ಎಲ್ಲ ನೆರವು, ಸಹಕಾರ ನೀಡುವುದಾಗಿ...

ಮಳೆ, ಪ್ರವಾಹದಿಂದ ತತ್ತರಿಸಿದ ಉತ್ತರ ಕರ್ನಾಟಕ: ರಾಜ್ಯಕ್ಕೆ ಕೇಂದ್ರದ ನೆರವಿನ ಅಭಯ
ರಾಜನಾಥ್ ಸಿಂಗ್
Published On :
ಬೆಳಗಾವಿ: ಉತ್ತರ ಕರ್ನಾಟಕ ಮತ್ತು ಕರಾವಳಿ ಸೇರಿದಂತೆ ರಾಜ್ಯದ  15 ಜಿಲ್ಲೆಗಳಲ್ಲಿ ಭಾರಿ ಮಳೆ, ಪ್ರವಾಹದ ಪರಿಸ್ಥಿತಿ ನಿಭಾಯಿಸಲು ರಾಜ್ಯಕ್ಕೆ ಎಲ್ಲ ನೆರವು, ಸಹಕಾರ ನೀಡುವುದಾಗಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ.
ಮೂಲಗಳ ಪ್ರಕಾರ, ರಾಜ್ಯಕ್ಕೆ  ಹೆಚ್ಚಿನ ರಕ್ಷಣಾ ತಂಡಗಳನ್ನು ರವಾನಿಸುವುದಾಗಿಯೂ, ಪ್ರವಾಹ ಪರಿಹಾರ ಕಾರ್ಯಾಚರಣೆ ನಿಯೋಜನೆಗಾಗಿ ಹತ್ತು ಹೆಲಿಕಾಪ್ಟರ್‌ಗಳನ್ನು ಕಳುಹಿಸಿಕೊಡುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ ಎನ್ನಲಾಗಿದೆ,
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿರುವ ರಾಜನಾಥ್ ಸಿಂಗ್ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಅಗತ್ಯ ಸಹಕಾರ ನೀಡುವುದಾಗಿಯೂ, ಜೊತೆಗೆ ಹೆಚ್ಚಿನ ತಂಡಗಳನ್ನು ಕಳುಹಿಸುವುದಾಗಿಯೂ ಅವರು ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಮಧ್ಯೆ, ಪ್ರವಾಹ ಪೀಡಿತ ಮುಂಬೈ - ಕರ್ನಾಟಕ ಭಾಗದ ಜಿಲ್ಲೆಗಳಿಗೆ ಭೇಟಿ ನೀಡಿರುವ  ಮುಖ್ಯಮಂತ್ರಿ ಇಂದು ಬೆಳಗಾವಿ ನಗರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತ  ಜನರ ಅಹವಾಲು ಕೇಳಿದ್ದಾರೆ. ಪ್ರವಾಹ ಪೀಡಿತ ಕುಟುಂಬಗಳ ಸಂತ್ರಸ್ತರಿಂದ  ಅರ್ಜಿಗಳನ್ನು ಸ್ವೀಕರಿಸಿ ಸಾಧ್ಯವಿರುವ ಎಲ್ಲ ಸಹಾಯ ಮಾಡುವ ಅಭಯ ನೀಡಿದ್ದಾರೆ.
 ರಾಜ್ಯದ 15 ಕ್ಕೂ  ಹೆಚ್ಚು ಜಿಲ್ಲೆಗಳಲ್ಲಿ ಸುರಿದ ಧಾರಾಕಾರ ಮಳೆ ಮತ್ತು ಅವಘಡಗಳಿಂದ ನಿನ್ನೆ ಒಂದೇ ದಿನ 11 ಮಂದಿ ಮೃತಪಟ್ಟಿದ್ದು  ಇದರ ಜೊತೆಗೆ ಸಾವಿರಾರು ಎಕರೆ  ಪ್ರದೇಶದಲ್ಲಿನ ಬೆಳೆ ಇತರೆ ಆಸ್ತಿಪಾಸ್ತಿಗೂ ಬಹಳ ನಷ್ಟವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.