ರಾಜ್ಯ

ಪ್ರವಾಹ ಸಂತ್ರಸ್ಥರಿಗೆ ಧೈರ್ಯ ತುಂಬಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಪ್ರವಾಹ ಸಂತ್ರಸ್ಥರಿಗೆ ಧೈರ್ಯ ತುಂಬಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
Published On :
ಬೆಳಗಾವಿ: ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು  ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಕುಂದಾನಗರಿ ಬೆಳಗಾವಿಯಲ್ಲಿಂದು ಬೆಳಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಹೊಸ ಮನೆ ನಿರ್ಮಾಣ ಮಾಡಿಕೊಡಲಾಗುವುದು, ಆಸ್ತಿ ನಷ್ಟವಾದವರಿಗೂ ಪರಿಹಾರ ನೀಡಲಾಗುವುದು, ಪ್ರವಾಹದಲ್ಲಿ ಮೃತರಾದವರಿಗೆ ಐದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಘೋಷಿಸಿದರು.
ಪ್ರವಾಹ ಪರಿಸ್ಥಿತಿ ನಿಭಾಯಿಸಲು ಜಗದೀಶ್ ಶೆಟ್ಟರ್, ಈಶ್ವರಪ್ಪ, ಶೋಭಾ ಕರಂದ್ಲಾಜೆ, ಕೋಟಾ ಶ್ರೀನಿವಾಸ ಪೂಜಾರಿ, ಪ್ರತಾಪ್ ಸಿಂಹ, ಬಿ.ವೈ. ರಾಘವೇಂದ್ರ, ಸಿ.ಎಂ. ಉದಾಸಿ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದ್ದು, ಕೂಡಲೇ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಕಾರ್ಯಾಚರಣೆ ನಡೆಸಲು ಸೂಚಿಸಲಾಗಿದೆ ಎಂದು ಹೇಳಿದರು.
ಈ ಮಧ್ಯೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲು ಹೆಲಿಕಾಪ್ಟರ್ ಒದಗಿಸುವಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಬಳಿ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.  ವಿಶೇಷ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ತಂಡ ಇಂದು ಸಂಜೆ ಬೆಳಗಾವಿಗೆ ಆಗಮಿಸುವ ಸಾಧ್ಯತೆ ಇದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.