ಪ್ರವಾಹ ಪರಿಸ್ಥಿತಿಗೆ ಮಿಡಿದ 'ಮಾತೃ ಹೃದಯಿ' ಸುಧಾ ಮೂರ್ತಿ: ಸಿಎಂ ಪರಿಹಾರ ನಿಧಿಗೆ 10 ಕೋಟಿ ದೇಣಿಗೆ!
ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಲಕ್ಷಾಂತರ ಜನರು ಮನೆ ಮಠ ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಅಲ್ಲದೆ ಪರಿಹಾರಕ್ಕಾಗಿ ಎದುರು ನೋಡುತ್ತಿದ್ದು...

Published On :
ಬೆಂಗಳೂರು: ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಲಕ್ಷಾಂತರ ಜನರು ಮನೆ ಮಠ ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಅಲ್ಲದೆ ಪರಿಹಾರಕ್ಕಾಗಿ ಎದುರು ನೋಡುತ್ತಿದ್ದು ಇದಕ್ಕೆ ಸ್ಪಂಧಿಸಿರುವ ಸುಧಾ ಮೂರ್ತಿ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 10 ಕೋಟಿ ರುಪಾಯಿ ದೇಣಿಗೆ ನೀಡಿದ್ದಾರೆ.
ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ. ಸುಧಾ ಮೂರ್ತಿ ಅವರು ಸಿಎಂ ಪರಿಹಾರ ನಿಧಿಗೆ 10 ಕೋಟಿ ರುಪಾಯಿ ದೇಣಿಗೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ತಿಳಿಸಿದ್ದಾರೆ.
ಕುಂದಾನಗರಿ ಬೆಳಗಾವಿಯಲ್ಲಿಂದು ಬೆಳಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಹೊಸ ಮನೆ ನಿರ್ಮಾಣ ಮಾಡಿಕೊಡಲಾಗುವುದು, ಆಸ್ತಿ ನಷ್ಟವಾದವರಿಗೂ ಪರಿಹಾರ ನೀಡಲಾಗುವುದು, ಪ್ರವಾಹದಲ್ಲಿ ಮೃತರಾದವರಿಗೆ ಐದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಘೋಷಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Infosysಇನ್ಫೋಸಿಸ್ಬಿಎಸ್ ಯಡಿಯೂರಪ್ಪSudha murthyಸುಧಾ ಮೂರ್ತಿKarnataka FloodsBS YediyurappaCM Relief Fundಕರ್ನಾಟಕ ಪ್ರವಾಹ ಪರಿಸ್ಥಿತಿಸಿಎಂ ಪರಿಹಾರ ನಿಧಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


