ಶಿವಮೊಗ್ಗ: ತುಂಗಾ ನದಿಯಲ್ಲಿ ಕೊಚ್ಚಿಕೊಂಡು ಹೋದ ಮಹಿಳೆ, ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು
ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಸಾವಿರಾರು ಎಕರೆ ಕೃಷಿ ಭೂಮಿ ಜಲಾವೃತಗೊಂಡಿದ್ದು, ಇಬ್ಬರು ಮೃತಪಟ್ಟಿದ್ದಾರೆ

Published On :
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಸಾವಿರಾರು ಎಕರೆ ಕೃಷಿ ಭೂಮಿ ಜಲಾವೃತಗೊಂಡಿದ್ದು, ಇಬ್ಬರು ಮೃತಪಟ್ಟಿದ್ದಾರೆ . ಸಂತ್ರಸ್ತ ಜನರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.
ಬುಧವಾರ ತುಂಗಾ ನದಿ ನೀರಿನಲ್ಲಿ ಸಿಲುಕಿ ಮಹಿಳೆಯೊಬ್ಬರು ಕೊಚ್ಚಿಕೊಂಡು ಹೋಗಿದ್ದಾರೆ. ಕೊಟೆ ಪೊಲೀಸರು ಮಹಿಳೆಯ ಮೃತದೇಹವನ್ನು ಹುಡುಕಿದ್ದಾರೆ. ಮತ್ತೊಂದು ಘಟನೆಯಲ್ಲಿ ಶಿಕಾರಿಪುರ ತಾಲೂಕಿನ ಚಿಕ್ಕಂಗಡಿ ಗ್ರಾಮದ ರೈತರಿಗೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ.
ಮೃತಪಟ್ಟ ರೈತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಮೆಸ್ಕಾಂಗೆ ತಹಸೀಲ್ದಾರ್ ನಿರ್ದೇಶಿಸಿದ್ದಾರೆ. ಧಾರಾಕಾರ ಮಳೆಯಿಂದಾಗಿ ಶಿಕಾರಿಪುರದ ಐದು ಹಾಗೂ ಸೊರಬ ತಾಲೂಕಿನ ನಾಲ್ಕು ಹಳ್ಳಿಗಳಲ್ಲಿ ವಿದ್ಯುತ್ ಕಂಬಗಳು ನೆಲಕ್ಕುರುಳಿ ಬಿದಿದ್ದು, ವಿದ್ಯುತ್ ಪೂರೈಕೆಗೆ ಅಡ್ಡಿಯುಂಟಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Shivamoggaheavy rainಧಾರಾಕಾರ ಮಳೆTunga riverತುಂಗಾ ನದಿWoman swept awayMan electrocuted ಶಿವಮೊಗ್ಗನೀರಿನಲ್ಲಿ ಕೊಚ್ಚಿಕೊಂಡು ಹೋದ ಮಹಿಳೆವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


