ಪ್ರವಾಹ ಪರಿಸ್ಥಿತಿ ನಿಭಾಯಿಸಲು ಯಡಿಯೂರಪ್ಪ ಹೆಣಗಾಟ : ಡಾ.ಜಿ.ಪರಮೇಶ‍್ವರ್
ಅನೇಕ ಗೊಂದಲ, ರಾಜಕೀಯ ದೊಂಬರಾಟದ ನಡುವೆ ಸರ್ಕಾರ ರಚನೆ ಮಾಡಿರುವ ಬಿ ಎಸ್ ಯಡಿಯೂರಪ್ಪ, ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಹೆಣಗಾಡುತ್ತಿದ್ದಾರೆ

ಬೆಂಗಳೂರು: ಅನೇಕ ಗೊಂದಲ, ರಾಜಕೀಯ ದೊಂಬರಾಟದ ನಡುವೆ ಸರ್ಕಾರ ರಚನೆ ಮಾಡಿರುವ ಬಿ ಎಸ್ ಯಡಿಯೂರಪ್ಪ, ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಹೆಣಗಾಡುತ್ತಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ, ಕಾಂಗ್ರೆಸ್ ಮುಖಂಡ ಡಾ ಜಿ ಪರಮೇಶ್ವರ್ ಟೀಕಿಸಿದ್ದಾರೆ
ಸದಾಶಿವನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಪುಟದ ಸದಸ್ಯರಿಲ್ಲದ ಏಕವ್ಯಕ್ತಿ ಸರ್ಕಾರ ರಾಜ್ಯದಲ್ಲಿದೆ. ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಒಬ್ಬರೇ ಕಳೆದ 20 ದಿನಗಳಿಂದ ಸರ್ಕಾರ ನಡೆಸುತ್ತಿದ್ದಾರೆ.
ಸರ್ಕಾರ ರಚನೆ ಮಾಡುವುದರಲ್ಲಿ ಯಡಿಯೂರಪ್ಪ ತೋರಿಸಿದ್ದ ಪ್ರಯತ್ನವನ್ನು ಮಂತ್ರಿ ಮಂಡಲ ರಚನೆಯಲ್ಲಿ ತೋರಿಸುತ್ತಿಲ್ಲ ಏಕೆ. ಸಂಪುಟ ರಚನೆ ವಿಳಂಬ ಏಕೆ ಎಂದು ಅವರು ಪ್ರಶ್ನಿಸಿದರು.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಸಾಕಷ್ಟು ಕಸರತ್ತು ನಡೆಸಿದ್ದ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ, ಸಂಪುಟ ಭರ್ತಿಗೆ ಪ್ರಯತ್ನಿಸುತ್ತಿಲ್ಲದರ ಹಿಂದಿನ ಮರ್ಮವೇನು ಎಂದು ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


