ರಾಜ್ಯ

ರಾಜ್ಯದಲ್ಲಿ ವರುಣನ ಆರ್ಭಟ: ಇಂದು ವಿತ್ತ ಸಚಿವೆ ಸೀತಾರಾಮನ್ ಭೇಟಿ

ರಾಜ್ಯದಲ್ಲಿ ಭೀಕರ ಮಳೆಯಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು ರಾಜ್ಯವು ಜಲ ಸಂಕಷ್ಟದಲ್ಲಿದೆ. ಈ ನಡುವೆ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು ಇಂದು ಕರ್ನಾಟಕಕ್ಕೆ ಆಗಮಿಸಲಿದ್ದು....

ರಾಜ್ಯದಲ್ಲಿ ವರುಣನ ಆರ್ಭಟ: ಇಂದು ವಿತ್ತ ಸಚಿವೆ ಸೀತಾರಾಮನ್ ಭೇಟಿ
Published On :

ಬೆಂಗಳೂರು: ರಾಜ್ಯದಲ್ಲಿ ಭೀಕರ ಮಳೆಯಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು ರಾಜ್ಯವು ಜಲ ಸಂಕಷ್ಟದಲ್ಲಿದೆ. ಈ ನಡುವೆ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು ಇಂದು  ಕರ್ನಾಟಕಕ್ಕೆ ಆಗಮಿಸಲಿದ್ದು ಬೆಳಗಾವಿ, ಬಾಗಲಕೋಟೆ ಸೇರಿ ವಿವಿಧ ನೆರೆ ಸಂತ್ರಸ್ಥ ಜಿಲ್ಲೆಗಳಿಗೆ ಭೇಟಿ ಕೊಡಲಿದ್ದಾರೆ.

ಕರ್ನಾಟಕದಲ್ಲಿ 80,000 ಕ್ಕೂ ಹೆಚ್ಚು ಪ್ರವಾಹ ಪೀಡಿತ ಜನರನ್ನು ಸ್ಥಳಾಂತರಿಸಲಾಗಿದೆ. ರಾಜ್ಯದ ನೆರೆ ಪರಿಸ್ಥಿತಿಯಿಂದ ಇದುವರೆಗೆ 12 ಜನರು ಪ್ರಾಣ ಕಳೆದುಕೊಂಡಿದ್ದು ಸಿಎಂ ಯಡಿಯೂರಪ್ಪ  ಮೃತಪಟ್ಟ ಜನರ ರಕ್ತಸಂಬಂಧಿ ಗಳಿಗೆ  ಐದು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಸೀತಾರಾಮನ್ ಅವರು ವೈಮಾನಿಕ ಸಮೀಕ್ಷೆ ಅಲ್ಲದೆ ರಸ್ತೆ ಮಾರ್ಗದ ಮೂಲಕ ಸಹ ನೆರೆ ಪೀಡಿತ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ. 

ಪ್ರವಾಹ ಮತ್ತು ಮಳೆಯು ರಾಜ್ಯದ ಉತ್ತರ, ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಭಾರೀ ಹಾನಿಯನ್ನುಂಟು ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.