ರಾಜ್ಯ

ನೆರೆಪೀಡಿತ ಬೆಳಗಾವಿಗೆ ಕೇಂದ್ರ ವಿತ್ತ ಸಚಿವರ ಭೇಟಿ, 'ನಿಮ್ಮೊಡನೆ ನಾನಿದ್ದೇನೆ' ಎಂದ ನಿರ್ಮಲಾ ಸೀತಾರಾಮನ್

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೆರೆ ಪೀಡಿತ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದ್ದಾರೆ.

ನೆರೆಪೀಡಿತ ಬೆಳಗಾವಿಗೆ ಕೇಂದ್ರ ವಿತ್ತ ಸಚಿವರ ಭೇಟಿ, 'ನಿಮ್ಮೊಡನೆ ನಾನಿದ್ದೇನೆ' ಎಂದ ನಿರ್ಮಲಾ ಸೀತಾರಾಮನ್
ನೆರೆಪೀಡಿತ ಬೆಳಗಾವಿಗೆ ಕೇಂದ್ರ ವಿತ್ತ ಸಚಿವರ ಭೇಟಿ
Published On :

ಬೆಳಗಾವಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೆರೆ ಪೀಡಿತ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದ್ದಾರೆ.

ಜಿಲ್ಲೆಯ ಪ್ರವಾಹಪೀಡಿತ ಪ್ರದೇಶಗಳಿಗೆ ತೆರಳಿದ ಸಚಿವೆ ಸಾರ್ವಜನಿಕರು, ಸಂತ್ರಸ್ಥರ ಅಹವಾಲು ಆಲಿಸಿದ್ದಾರೆ.ಈ ವೇಳೆ ಕೇಂದ್ರ ರೈಲ್ವೆ ಖಾತೆ ಆಜ್ಯ ಸಚಿವ ಸುರೇಶ್ ಅಂಗಡಿ ಹಾಗೂ ಬೆಳಗಾವಿ ಜಿಲ್ಲಾಧಿಕಾರಿ ಎಸ್​.ಬಿ. ಬೊಮ್ಮನಹಳ್ಳಿ ಸಚಿವರಿಗೆ ಸಾಥ್ ನೀಡಿದ್ದಾರೆ.

ಕಾಲ್ನಡಿಗೆಯಲ್ಲಿ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿದ ಸಚಿವೆ ದಾಮಣೆ ರಸ್ತೆಯಲ್ಲಿ ಸೇರಿದ್ದ ನೂರಾರು ಜನರ ಮನವಿ ಆಲಿಸಿದ್ದಾರೆ.

ಶನಿವಾರ ಬೆಳಿಗ್ಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ನಿರ್ಮಲಾ ಸೀತಾರಾಮನ್ ವಿಮಾನ ನಿಲ್ದಾಣದಿಂದ ನೇರವಾಗಿ ಬೆಳಗಾವಿ ತೆರಳಿದ್ದರು.ಬೆಳಗಾವಿ, ಸಂಜೇಶ್ವರ ಸೇರಿ ನಾನಾ ಕಡೆಗಳಲ್ಲಿ ಸಂತ್ರಸ್ಥರ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಮಹಿಳೆಯರ ಕಣ್ನೀರಿಗೆ ಸಾಕ್ಷಿಯಾದ ಸಚಿವೆ ಎಲ್ಲವನ್ನೂ ಸರಿ ಪಡಿಸುತ್ತೇವೆ. ನಿಮ್ಮ ಜತೆಗೆ ನಾವಿದ್ದೇವೆ  ಎಂದು ಭರವಸೆ ನೀಡಿದ್ದಾರೆ.

ಅಧಿಕಾರಿಗಳ ಜತೆ ಮಾತನಾಡಿದ ನಿರ್ಮಲಾ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಬಗೆಗೆ ಮಾಹಿತಿ ಪಡೆದಿದ್ದು ಸೇನಾ ಹೆಲಿಕಾಪ್ಟರ್ ಸೇರಿದಂತೆ ಹೆಚ್ಚಿನ ನೆರವೇನಾದರೂ ಅಗತ್ಯವಿದೆಯೆ ಎಂದು ಕೇಳಿದ್ದಾಗಿ ವರದಿಯಾಗಿದೆ.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಕಾರಣ ರಾಜ್ಯಕ್ಕೆ ಹೆಚ್ಚುವರಿ ನೆರೆ ಪರಿಹಾರ ಸಿಗುವ ನಿರೀಕ್ಷೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.