ರಾಜ್ಯ

ಪ್ರವಾಹ: ಸಾವಿನ ಸಂಖ್ಯೆ 34ಕ್ಕೆ ಏರಿಕೆ, 10 ಸಾವಿರ ಕೋಟಿ ನಷ್ಟ

ಉತ್ತರ ಕರ್ನಾಟಕ, ಮಲ್ನಾಡು ಹಾಗೂ ಕರವಾಳಿ ಜಿಲ್ಲೆಗಳಲ್ಲಿ ಸುರಿದ ಮಳೆ ಹಾಗೂ ಪ್ರವಾಹಕ್ಕೆ ಸಾವಿಗೀಡಾದವರ ಸಂಖ್ಯೆ 34ಕ್ಕೇ ಏರಿಕೆ ಆಗಿದೆ.

ಪ್ರವಾಹ: ಸಾವಿನ ಸಂಖ್ಯೆ 34ಕ್ಕೆ ಏರಿಕೆ, 10 ಸಾವಿರ ಕೋಟಿ ನಷ್ಟ
Published On :

ಬೆಂಗಳೂರು: ಉತ್ತರ ಕರ್ನಾಟಕ, ಮಲ್ನಾಡು ಹಾಗೂ ಕರವಾಳಿ ಜಿಲ್ಲೆಗಳಲ್ಲಿ ಸುರಿದ ಮಳೆ ಹಾಗೂ ಪ್ರವಾಹಕ್ಕೆ ಸಾವಿಗೀಡಾದವರ ಸಂಖ್ಯೆ 34ಕ್ಕೇ ಏರಿಕೆ ಆಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಬೆಳಗಾವಿಯ ಸಾಂಬಾ ವಿಮಾನ ನಿಲ್ದಾಣದಿಂದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ನಡೆಸಿದರು. ಈ ವೇಳೆ ಅಮಿತ್ ಶಾ ಅವರೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಸೇರಿದಂತೆ ಅನೆಕ ಗಣ್ಯರು ಹಾಜರಿದ್ದರು. 

ಜನರಿಗೆ ಪರಿಹಾರ ನೀಡುವ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ: ಸಿಎಂ
ಇದೇ ವೇಳೆ ಜನರಿಗೆ ಪರಿಹಾರ ನೀಡುವ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ ಎಂದು ಸಿಎಂ ಬಿಎಸ್ ವೈ ಹೇಳಿದ್ದಾರೆ.  ಜನ-ಜಾನುವಾರುಗಳ ರಕ್ಷಣೆ, ಪುನರ್ವಸತಿ ಕಲ್ಪಿಸುವುದು , ಜನರಿಗೆ ಪರಿಹಾರ ನೀಡುವುದು ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಇದರಲ್ಲಿ ಯಾವುದೇ ರಾಜೀಯಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆಯಲ್ಲಿ ಪ್ರವಾಹ ಬಾಧಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ಹಾಗೂ ಹಿರಿಯ ಅಧಿಕಾರಿಗಳ ಸಭೆಯ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಹ ಸ್ಥಿತಿಯನ್ನು ನೋಡಿದರೆ ಅಂದಾಜು 30 ರಿಂದ 40 ಸಾವಿರ ಕೋಟಿ ರೂಪಾಯಿ ಹಾನಿಯಾಗಿದೆ ಎಂಬುದು ತಮ್ಮ ಅಭಿಪ್ರಾಯವಷ್ಟೆ. ಬೆಳಗಾವಿ ಸೇರಿದಂತೆ ರಾಜ್ಯದಲ್ಲಿ ನೆರೆ ಪ್ರವಾಹ ಹಾಗೂ ಧಾರಾಕಾರ ಮಳೆಯಿಂದಾಗಿ 10 ಸಾವಿರ ಕೋಟಿ ರೂ.ನಷ್ಟು ಹಾನಿಯಾಗಿದೆ ಎಂದು ಪ್ರಾಥಮಿಕ ಅಂದಾಜು ಮಾಡಲಾಗಿದೆ. ಸಮಗ್ರ ಸಮೀಕ್ಷೆ ಬಳಿಕ ಹಾನಿ ಕುರಿತು ಸ್ಪಷ್ಟತೆ ಸಿಗಲಿದೆ . ತುರ್ತಾಗಿ 3 ಸಾವಿರ ಕೋ ರೂ. ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ರಾಷ್ಟ್ರೀಯ ವಿಪತ್ತು ಘೋಷಣೆ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಬಿಟ್ಟದ್ದು ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.