'ಕುಮಾರಸ್ವಾಮಿ, ಅವರಪ್ಪನಿಗೆ ವಯಸ್ಸಾಗಿಲವೇ': ಕೆಎಸ್ ಈಶ್ವರಪ್ಪ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ ಎಂದು ಹೇಳಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ

ಶಿವಮೊಗ್ಗ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ ಎಂದು ಹೇಳಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.
ಶಿವಮೊಗ್ಗ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಹಾಗೂ ಅವರಪ್ಪ ಮಾಜಿ ಪ್ರಧಾನಿ ದೇವೇಗೌಡರಿಗೆ ವಯಸ್ಸಾಗಿಲ್ಲವೇ , ಅವರು ನೆರೆ ಪ್ರದೇಶಕ್ಕೆ ಭೇಟಿ ನೀಡುವುದನ್ನು ಸ್ವಾಗತಿಸುತ್ತೇನೆ ಆದರೆ, ವಯಸ್ಸಾಗಿದೆ ಎಂದು ಕೀಳುಮಟ್ಟದ ಹೇಳಿಕೆ ನೀಡುವುದು ಶೋಭೆ ತರುವುದಿಲ್ಲ ಎಂದು ಟೀಕಿಸಿದರು.
ಕುಮಾರಸ್ವಾಮಿ ರಾಜಕಾರಣ ಮಾಡಿದರೆ ನಮಗೂ ರಾಜಕಾರಣ ಮಾಡುವುದಕ್ಕೆ ಬರುತ್ತದೆ. ಆದರೆ, ಇದು ರಾಜಕಾರಣ ಮಾಡುವ ಸಮಯವಲ್ಲ, ರಾಜ್ಯದ ಜನ ನೆರೆ , ಅತಿವೃಷ್ಟಿಯಿಂದ ಪರಿತಪಿಸುತ್ತಿದ್ದಾರೆ. ಎಲ್ಲಾ ಪಕ್ಷದವರು ಒಟ್ಟಾಗಿ ಪರಿಹಾರ ಹುಡುಕುವುದು ಸೂಕ್ತ ಎಂದು ಕೆ. ಎಸ್. ಈಶ್ವರಪ್ಪ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


