ಕರ್ನಾಟಕ ಪ್ರವಾಹ: ಮೃತರ ಸಂಖ್ಯೆ 40ಕ್ಕೆ ಏರಿಕೆ, 14 ಮಂದಿ ಕಣ್ಮರೆ
ಹಿಂದೆಂದೂ ಕಂಡರಿಯದ ರೀತಿಯಲ್ಲಿ ಭೀಕರ ಪ್ರವಾಹಕ್ಕೆ ತುತ್ತಾಗಿರುವ ರಾಜ್ಯದಲ್ಲಿ ಆಗಸ್ಟ್ 1ರಿಂದಲೂ ಈವರೆಗೂ ಮೃತಪಟ್ಟವರ ಸಂಖ್ಯೆ 40ಕ್ಕೆ ಏರಿಕೆ ಆಗಿದೆ. 14 ಜನರು ಕಣ್ಮರೆಯಾಗಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.

ಬೆಂಗಳೂರು: ಹಿಂದೆಂದೂ ಕಂಡರಿಯದ ರೀತಿಯಲ್ಲಿ ಭೀಕರ ಪ್ರವಾಹಕ್ಕೆ ತುತ್ತಾಗಿರುವ ರಾಜ್ಯದಲ್ಲಿ ಆಗಸ್ಟ್ 1ರಿಂದಲೂ ಈವರೆಗೂ ಮೃತಪಟ್ಟವರ ಸಂಖ್ಯೆ 40ಕ್ಕೆ ಏರಿಕೆ ಆಗಿದೆ. 14 ಜನರು ಕಣ್ಮರೆಯಾಗಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.
ರಾಜ್ಯದಲ್ಲಿನ 17 ಜಿಲ್ಲೆಗಳ 80 ತಾಲೂಕುಗಳಲ್ಲಿನ 2028 ಗ್ರಾಮಗಳು ಪ್ರವಾಹಕ್ಕೆ ತುತ್ತಾಗಿದ್ದು, 5 ಲಕ್ಷದ 81 ಸಾವಿರದ 702 ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.
50 ಸಾವಿರದ 595 ಜಾನುವಾರುಗಳನ್ನು ರಕ್ಷಿಸಲಾಗಿದೆ. 1168 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, 3 ಲಕ್ಷದ 27 ಸಾವಿರದ 354 ಜನರು ಆಶ್ರಯ ಪಡೆದುಕೊಂಡಿದ್ದಾರೆ. 28 ಸಾವಿರದ 325 ಮನೆಗಳಿಗೆ ಹಾನಿಯಾಗಿದ್ದು, 4.20 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ನಷ್ಟ ಉಂಟಾಗಿದೆ .
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


