ರಾಜ್ಯ

ನೆರೆ ಪರಿಹಾರದಲ್ಲಿ ರಾಜಕೀಯ ಮಾಡುವುದಿಲ್ಲ- ಡಿಕೆ ಶಿವಕುಮಾರ್

ನೆರೆ ನಿರ್ವಹಣೆ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ಪರಿಹಾರ ಕಾರ್ಯಕ್ಕೆ ನಾವು ತೊಂದರೆ ಮಾಡುವುದಿಲ್ಲ. ಪರಿಹಾರ ಕಾರ್ಯದಲ್ಲಿ ಪಕ್ಷ ರಾಜಕೀಯ ಮಾಡುವುದಿಲ್ಲ ಎಂದು ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.

ನೆರೆ ಪರಿಹಾರದಲ್ಲಿ ರಾಜಕೀಯ ಮಾಡುವುದಿಲ್ಲ- ಡಿಕೆ ಶಿವಕುಮಾರ್
Published On :

ಹುಬ್ಬಳ್ಳಿ: ನೆರೆ ನಿರ್ವಹಣೆ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ಪರಿಹಾರ ಕಾರ್ಯಕ್ಕೆ ನಾವು ತೊಂದರೆ ಮಾಡುವುದಿಲ್ಲ. ಪರಿಹಾರ ಕಾರ್ಯದಲ್ಲಿ ಪಕ್ಷ ರಾಜಕೀಯ ಮಾಡುವುದಿಲ್ಲ ಎಂದು ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆಯಿಂದ ಹಾನಿಗೀಡಾದ ಕುಂದಗೋಳ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದು, ನೆರೆ ಸಂತ್ರಸ್ತರಿಗೆ ಸಾಂತ್ವನ ಹೇಳುವುದಾಗಿ ತಿಳಿಸಿದರು.

 ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಭೀಕರ ಪ್ರವಾಹ ತಲೆದೋರಿದ್ದು, ಸಂತ್ರಸ್ತರಿಗೆ ಸಹಾಯ ಹಸ್ತ ಚಾಚುವಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಕುಂದಗೋಳಕ್ಕೆ ಭೇಟಿ ನೀಡಿದ ನಂತರ ಹುಬ್ಬಳ್ಳಿ, ಬೈಲಹೊಂಗಲ, ರಾಯಚೂರು, ಕೊಪ್ಪಳ ಸೇರಿದಂತೆ ಇತರ ಕಡೆ ಪ್ರವಾಸ ಮಾಡಲಾಗುವುದು ಎಂದು ಅವರು ತಿಳಿಸಿದರು.

ರಾಜ್ಯದ ಇತಿಹಾಸದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳಿಲ್ಲದೆ ಸ್ವಾತಂತ್ರ್ಯ ದಿನಾಚರಣೆ ವೇಳೆ ಜಿಲ್ಲೆಗಳಲ್ಲಿ ಅಧಿಕಾರಿಗಳು ಧ್ವಜಾರೋಹಣ ಮಾಡುತ್ತಿದ್ದಾರೆ. ಇದು ಬಿಜೆಪಿ ಸರ್ಕಾರ ಅಧಿಕಾರಿಗಳಿಗೆ ನೀಡಿದ ಕೊಡುಗೆ ಎಂದು ಅವರು ಲೇವಡಿ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.