ದಕ್ಷಿಣ ಕನ್ನಡ: ಬಸ್ಗಿಗೆ ಕಾಯುತ್ತಿದ್ದ ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ, ಓರ್ವಳ ಸ್ಥಿತಿ ಗಂಭೀರ
ಅತೀ ವೇಗದಲ್ಲಿ ಚಲಿಸುತ್ತಿದ್ದ ಕಾರೊಂದು ಕಾಲೇಜು ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡಿದ್ದು, ಓರ್ವಳ ಸ್ಥಿತಿ ಚಿಂತಾಜನಕವಾಗಿರುವ ಘಟನೆ ದಕ್ಷಿಣ ಕನ್ನಡ...

ಮೂಡಬಿದಿರೆ: ಅತೀ ವೇಗದಲ್ಲಿ ಚಲಿಸುತ್ತಿದ್ದ ಕಾರೊಂದು ಕಾಲೇಜು ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡಿದ್ದು, ಓರ್ವಳ ಸ್ಥಿತಿ ಚಿಂತಾಜನಕವಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಬೆಳುವಾಯಿ ಸಮೀಪ ಮಂಗಳವಾರ ನಡೆದಿದೆ.
ಬೆಳುವಾಯಿ ಮೂಡಾಯಿಕ್ಕಾಡ್ ನಿವಾಸಿ ಜಗನ್ನಾಥ ಮಡಿವಾಳ ಎಂಬವರ ಪುತ್ರಿ ಶುಭಲಕ್ಷ್ಮೀ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರು ಉಡುಪಿ ಹಿರಿಯಡ್ಕದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎಂ.ಕಾಂ ವಿದ್ಯಾಭ್ಯಾಸ ಮಾಡುತ್ತಿದ್ದರು.
ನಾಲ್ವರು ವಿದ್ಯಾರ್ಥಿನಿಯರು ಕಾಲೇಜಿಗೆ ತೆರಳಲು ಬೆಳಗ್ಗೆ ಬೆಳವಾಯಿ ಸಮೀಪದ ಕಾಂತಾವರ ಕ್ರಾಸ್ ನಲ್ಲಿ ಬಸ್ಸಿಗಾಗಿ ಕಾಯುತ್ತಿದ್ದರು. ಈ ವೇಳೆ ಮೂಡಬಿದಿರೆಯಿಂದ ಕಾರ್ಕಳ ಕಡೆಗೆ ಅತೀ ವೇಗವಾಗಿ ತೆರಳುತ್ತಿದ್ದ ಇನ್ನೋವಾ ಕಾರು ಅವರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಶುಭಲಕ್ಷ್ಮೀ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಸ್ಥಳೀಯರು ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಉಳಿದ ಮೂವರು ವಿದ್ಯಾರ್ಥಿನಿಯರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಮೂಡಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


