ಬೆಳಗಾವಿ: ಪ್ರವಾಹದಲ್ಲಿ ಕೊಚ್ಚಿ ಹೋದ ಮನೆ, ಬೆಳೆ: ರೈತ ಆತ್ಮಹತ್ಯೆ
ಭೀಕರ ಪ್ರವಾಹದಲ್ಲಿ ಮನೆ, ಬೆಳೆ ಕೊಚ್ಚಿ ಹೋದರಿಂದ ಮನನೊಂದ ಚಿಕ್ಕೋಡಿ ತಾಲೂಕಿನ ಕಾಲೊಲ್ ಗ್ರಾಮದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಳಗಾವಿ: ಭೀಕರ ಪ್ರವಾಹದಲ್ಲಿ ಮನೆ, ಬೆಳೆ ಕೊಚ್ಚಿ ಹೋದರಿಂದ ಮನನೊಂದ ಚಿಕ್ಕೋಡಿ ತಾಲೂಕಿನ ಕಾಲೊಲ್ ಗ್ರಾಮದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕಾಲೊಲ್ ನಿವಾಸಿ ಅಪ್ಪಸಾಬ್ ಕಾಳಪ್ಪ ಮಂಗವಟ್ಟಿ (50 ) ಎಂದು ಮೃತಪಟ್ಟ ದುರ್ದೈವಿಯಾಗಿದ್ದಾರೆ.
ವಿವಿಧ ಬ್ಯಾಂಕುಗಳಿಂದ ಸಾಲ ಶೂಲ ಮಾಡಿ ಮಂಗವಟ್ಟಿ ಕಬ್ಬು ಬೆಳೆದಿದ್ದರು. ಆದರೆ, ಉತ್ತಮ ಬೆಳೆ ಬಂದು ಕಟಾವಿನ ಹಂತದಲ್ಲಿರಬೇಕಾದರೆ ಪ್ರವಾಹಕ್ಕೆ ಸಿಲುಕಿ ಎಲ್ಲವೂ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಇದರಿಂದಾಗಿ ಮನನೊಂದು ಆತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಗವಟ್ಟಿಯನ್ನು ಆಸ್ಪತ್ರೆಗೆ ಸೇರಿಸಿ ಬದುಕುಳಿಸಲು ಪ್ರಯತ್ನಿಸಲಾಯಿತಾದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಮೂಲಗಳು ಹೇಳಿವೆ.
ಚಿಕ್ಕೊಡಿ ತಾಲೂಕಿನಲ್ಲಿ ಭಾರೀ ಪ್ರವಾಹದಿಂದಾಗಿ ಸಾವಿರಾರು ಕಬ್ಬು ಬೆಳೆಗಾರರು ಅಪಾರ ಪ್ರಮಾಣದ ನಷ್ಟ ಅನುಭವಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


