ಜಿಲ್ಲಾಧಿಕಾರಿಗಳಿಗೆ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಮಾಡುವ ಭಾಗ್ಯ!
ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವಾಗದ ಹಿನ್ನೆಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆಯಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಯಾ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನೆರವೇರಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವಾಗದ ಹಿನ್ನೆಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆಯಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಯಾ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನೆರವೇರಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ.
ಇದೇ 15 ರಂದು ಆಚರಿಸುವ ಸ್ವಾತಂತ್ರ್ಯ ದಿನಾಚರಣೆಯಂದು ಬೆಂಗಳೂರು ನಗರ ಜಿಲ್ಲೆಯನ್ನು ಹೊರತುಪಡಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಯಾ ಜಿಲ್ಲಾಧಿಕಾರಿಗಳು, ಉಪ ವಿಭಾಗಗಳಲ್ಲಿ ಉಪ ವಿಭಾಗಾಧಿಕಾರಿಗಳು ಮತ್ತು ತಾಲೂಕುಗಳಲ್ಲಿ ತಹಸೀಲ್ದಾರ್ ಅವರು ಧ್ವಜಾರೋಹಣ ಮಾಡಬೇಕು. ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿನ ನೆರೆಯ ಕಾರಣದಿಂದಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯುವ ಪ್ರಧಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಧ್ವಜಾರೋಹಣ ನೆರವೇರಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


