ರಾಜ್ಯ

ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಭಾರಿ ವಾಹನಗಳ ಸಂಚಾರ ಶುರು

ಸಂಕೇಶ್ವರ ಮತ್ತು ನಿಪಾಣ್ಣಿಯಲ್ಲಿ ಕಳೆದ 12 ದಿನಗಳಿಂದ ಉಂಟಾಗಿದ್ದ ಭಾರೀ ಪ್ರವಾಹದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಬೆಳಗಾವಿ- ಮಹಾರಾಷ್ಟ್ರದ ಕೊಲ್ಹಾಪುರ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭಾರಿ ವಾಹನಗಳ ಸಂಚಾರ ಆರಂಭವಾಗಿದೆ.

ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಭಾರಿ ವಾಹನಗಳ ಸಂಚಾರ ಶುರು
Published On :

ಬೆಳಗಾವಿ:  ಸಂಕೇಶ್ವರ ಮತ್ತು ನಿಪಾಣ್ಣಿಯಲ್ಲಿ ಕಳೆದ 12 ದಿನಗಳಿಂದ ಉಂಟಾಗಿದ್ದ ಭಾರೀ ಪ್ರವಾಹದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಬೆಳಗಾವಿ- ಮಹಾರಾಷ್ಟ್ರದ ಕೊಲ್ಹಾಪುರ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭಾರಿ ವಾಹನಗಳ ಸಂಚಾರ ಆರಂಭವಾಗಿದೆ.

ಪ್ರವಾಹದ ನೀರು ಈಗಲೂ ಕೂಡಾ ಈ ಹೆದ್ದಾರಿಯಲ್ಲಿ ಹರಿಯುತ್ತಿದೆ. ಆದಾಗ್ಯೂ, ಪ್ರಾಯೋಗಿಕವಾಗಿ ಮಿಲಿಟರಿ ಟ್ರಕ್  ಈ ಮಾರ್ಗದಲ್ಲಿ ಸಂಚರಿಸಿತು. ನಂತರ ಬಸ್ಸು, ಲಾರಿಯಂತಹ ಭಾರೀ ವಾಹನಗಳು ಈ ಮಾರ್ಗದಲ್ಲಿ ಸಂಚರಿಸಬಹುದು ಎಂಬುದನ್ನು ಮನಗೊಂಡು ಭಾರಿ ವಾಹನಗಳು ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ. 

ಈ ಹೆದ್ದಾರಿಯಲ್ಲಿ ಎರಡು ಅಡಿವರೆಗೂ ಈಗಲೂ ನೀರು ಹರಿಯುತ್ತಿರುವುದರಿಂದ ಕಾರು ಮತ್ತಿತರ  ಲಘು ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. 

ಪ್ರವಾಹ ಕ್ಷೀಣಿಸಿದ ನಂತರ ಈ ಮಾರ್ಗದಲ್ಲಿ ಕಾರು ಮತ್ತಿತರ ಲಘು ವಾಹನಗಳನ್ನು ಸಂಚರಿಸಲು ಅವಕಾಶ ಮಾಡಿಕೊಡಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.