ತುಂಗಭದ್ರಾ ಜಲಾಶಯ ಒಡೆದಿಲ್ಲ: ಜಿಲ್ಲಾಧಿಕಾರಿ ಸುನೀಲ್ಕುಮಾರ್ ಸ್ಪಷ್ಟನೆ
ತುಂಗಭದ್ರಾ ಜಲಾಶಯ ಒಡೆದಿಲ್ಲ. ಗ್ರಾಮಸ್ಥರು ಆತಂಕಪಡುವ ಅಗತ್ಯವಿಲ್ಲ ಎಂದು ಕೊಪ್ಪಳ ಜಿಲ್ಲಾಧಿಕಾರಿ ಸುನೀಲ್ ಕುಮಾರ್ ಅವರು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.

ಕೊಪ್ಪಳ: ತುಂಗಭದ್ರಾ ಜಲಾಶಯ ಒಡೆದಿಲ್ಲ. ಗ್ರಾಮಸ್ಥರು ಆತಂಕಪಡುವ ಅಗತ್ಯವಿಲ್ಲ ಎಂದು ಕೊಪ್ಪಳ ಜಿಲ್ಲಾಧಿಕಾರಿ ಸುನೀಲ್ ಕುಮಾರ್ ಅವರು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ಜಲಾಶಯ ಒಡೆದಿಲ್ಲ. ತುಂಗಭದ್ರಾ ಎಡದಂಡೆ ಮುಖ್ಯಕಾಲುವೆ ಒಡೆದಿದ್ದರಿಂದ ಅಲ್ಪ ಪ್ರಮಾಣದ ನೀರು ಪೋಲಾಗುತ್ತಿದೆ. ಪಂಪಾವನ ಜಲಾಶಯದ ಪಕ್ಕದಲ್ಲಿರುವುದರಿಂದ ಜಲಾವೃತಗೊಂಡಿದೆ. ಜಲಾಶಯದ ಎಂಜನಿಯರ್ ಅದನ್ನು ಸರಿಪಡಿಸುತ್ತಾರೆ ಎಂದರು.
ಜಲಾಶಯ ಒಡೆದಿದೆ ಎನ್ನುವುದು ಶುದ್ಧ ಸುಳ್ಳು. ಈ ಬಗ್ಗೆ ಜನರು ತಂಕಕ್ಕೊಳಗಾಗಬಾರದು.
ಸುತ್ತಮುತ್ತಲಿನ ಹಳ್ಳಿಗಳಲ್ಲಿ ಈಗಾಗಲೇ ಡಂಗೂರ ಸಾರಿ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.
ಜಲಾಶಯ ಒಡೆದಿದೆ ಎಂಬ ವದಂತಿಯೊಂದು ಹಬ್ಬಿದ ಹಿನ್ನೆಲೆಯಲ್ಲಿ ನದಿ ತೀರದ ಬಂಡಿಹರ್ಲಾಪುರ, ಸಣಾಪುರ, ಹನುಮನಹಳ್ಳಿ, ಅಗಳಕೇರ, ಶಿವಪುರ ಗ್ರಾಮಸ್ಥರು ಆತಂಕ್ಕೀಡಾಗಿದ್ದರು. ಈ ಹಿನ್ನೆಲೆಯಲ್ಲಿ ಮಂಗಳವಾರ ಖಾಸಗಿ ಶಾಲಾ- ಕಾಲೇಜುಗಳಿಗೆ ದಿಢೀರ್ ರಜೆ ಘೋಷಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


