ಹಾಸನ: ಬೈಕ್‍ಗೆ ಕಾರು ಡಿಕ್ಕಿ, ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ದುರ್ಮರಣ
ಬೈಕ್‍ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟಿರುವ ಘಟನೆ ಹೊಳೆನರಸೀಪುರ ತಾಲೂಕಿನ ಸಿಗರನಹಳ್ಳಿ ಬಳಿ ಇಂದು ನಡೆದಿದೆ.

ಹಾಸನ: ಬೈಕ್‍ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟಿರುವ ಘಟನೆ ಹೊಳೆನರಸೀಪುರ ತಾಲೂಕಿನ ಸಿಗರನಹಳ್ಳಿ ಬಳಿ ಇಂದು ನಡೆದಿದೆ.
ಸಿಗರನಹಳ್ಳಿ ನಿವಾಸಿಗಳಾದ ಉಮೇಶ್(23) ಹಾಗೂ ಹರೀಶ್(22) ಮೃತಪಟ್ಟ ಯುವಕರು. ಹಾಸನ ನಗರದಿಂದ ಬೈಕ್ ನಲ್ಲಿ ಹೊಳೆನರಸೀಪುರ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ಕಾರು ಚಾಲಕನಿಗೂ ಗಂಭೀರವಾಗಿ ಗಾಯವಾಗಿದೆ.
ಸುದ್ದಿ ತಿಳಿದ ತಕ್ಷಣ ಹೊಳೆನರಸೀಪುರ ನಗರ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


