ಹಾವೇರಿ: ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಚತ್ರಿ ಗ್ರಾಮದಲ್ಲಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.

ಹಾವೇರಿ: ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಚತ್ರಿ ಗ್ರಾಮದಲ್ಲಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.
ಮೃತರನ್ನು ದಾವಣಗೆರೆ ಮೂಲದ ಆನಂದ್ ಕುಮಾರ್, ಕೊಟ್ರೇಶ್ ಸಿದ್ದರಾಮಪ್ಪ ಮತ್ತು ಸತೀಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಮೂವರು ದಾವಣಗೆರೆಯಿಂದ ಗೋವಾದತ್ತ ಹೊರಟ್ಟಿದ್ದರು. ಬ್ಯಾಡಗಿ ತಾಲೂಕಿನ ಛತ್ರ ಗ್ರಾಮದ ಎನ್ಎಚ್ 4 ರಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಕಾರು ಡಿವೈಡರ್ಗೆ ಡಿಕ್ಕಿಯಾಗಿ ಉರುಳಿಬಿದ್ದಿದೆ.
ಈ ಸಂಬಂಧ ಬ್ಯಾಡಗಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


