ರಾಜ್ಯ

ಆರ್ಥಿಕ ಸಂಕಷ್ಟಕ್ಕೆ ಇಡೀ ಕುಟುಂಬ ಆಪೋಷನ: ಗರ್ಭಿಣಿ ಪತ್ನಿ ಸೇರಿ ನಾಲ್ವರಿಗೆ ಗುಂಡಿಕ್ಕಿ ವ್ಯಕ್ತಿ ಆತ್ಮಹತ್ಯೆ

ವ್ಯವಹಾರದಲ್ಲಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಕಳೆದ ರಾತ್ರಿ ನಡೆದಿದ್ದು, ಇಂದು ಬೆಳಗ್ಗೆ

ಆರ್ಥಿಕ ಸಂಕಷ್ಟಕ್ಕೆ ಇಡೀ ಕುಟುಂಬ ಆಪೋಷನ: ಗರ್ಭಿಣಿ ಪತ್ನಿ ಸೇರಿ ನಾಲ್ವರಿಗೆ ಗುಂಡಿಕ್ಕಿ ವ್ಯಕ್ತಿ ಆತ್ಮಹತ್ಯೆ
ಐವರ ಆತ್ಮಹತ್ಯೆ
Published On :

ಚಾಮರಾಜನಗರ: ವ್ಯವಹಾರದಲ್ಲಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಕಳೆದ ರಾತ್ರಿ ನಡೆದಿದ್ದು, ಇಂದು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. 

ಮೈಸೂರಿನ ದಟ್ಟಗಳ್ಳಿ ನಿವಾಸಿಗಳಾದ  ಓಂ ಪ್ರಕಾಶ್ (36) ಪತ್ನಿ ನಿಖಿತಾ(30), ಮಗ ಆರ್ಯ ಕೃಷ್ಣ(4) , ತಾಯಿ ಹೇಮಲತಾ (60), ತಂದೆ ನಾಗರಾಜು ಭಟ್ಟಾಚಾರ್ಯ (65) ಸಾವನ್ನಪ್ಪಿದವರು.

ತುಮಕೂರು ಮೂಲದ, ಓಂ ಪ್ರಕಾಶ್ ಮೈಸೂರಿನ ದಟ್ಟಗಳ್ಳಿಯಲ್ಲಿ‌ ಮನೆ ಮಾಡಿಕೊಂಡು ಅನಿಮೇಶನ್‌ ಸಂಸ್ಥೆ ನಡೆಸುತ್ತಿದ್ದರು . ಪತ್ನಿ ನಿಖಿತಾ 8 ತಿಂಗಳ ಗರ್ಭಿಣಿಯಾಗಿದ್ದರು. ಓಂ ಪ್ರಕಾಶ್‌ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. 

ಬುಧವಾರ ಬೆಳಗ್ಗೆ ಗುಂಡ್ಲುಪೇಟೆ ಪಟ್ಟಣದ ಲಾಡ್ಜ್ ನಲ್ಲಿ ವಾಸ್ತವ್ಯ ಹೂಡಿದ್ದ ಓಂ ಪ್ರಕಾಶ್‌ ಮತ್ತು ಕುಟುಂಬ , ತಡರಾತ್ರಿ 2 ಗಂಟೆಯ ವೇಳೆಗೆ ಊಟಿ ರಸ್ತೆಯ ಮಹೇಶ್ ಚಂದ್ರ ಗುರು ಅವರಿಗೆ ಸೇರಿದ ಜಮೀನಿಗೆ ಬಂದು ಪಿಸ್ತೂಲ್ ನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ತಂದೆ ಹಾಗೂ ಮಗನಿಗೆ ಮೊದಲು ಗುಂಡು ಹೊಡೆದ ಓಂ ಪ್ರಕಾಶ್, ನಂತರ ತಾಯಿ -ಹೆಂಡತಿಗೆ ಗುಂಡಿಕ್ಕಿದ್ದರು. ಕೊನೆಗೆ ತಾವೇ ತನ್ನ ಬಾಯಿಗೆ ಪಿಸ್ತೂಲ್ ಇಟ್ಟು  ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹಣಕಾಸಿನ ತೊಂದರೆಯೇ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಮುಖ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಗುಂಡ್ಲುಪೇಟೆ ಪೋಲಿಸರು ಭೇಟಿ ನೀಡಿ ಸೆಕ್ಷನ್ 302, 306 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.