ಬೆಂಗಳೂರಿನಲ್ಲಿ ಹೈ ಆಲರ್ಟ್: ಎಲ್ಲೆಡೆ ಕಟ್ಟೆಚ್ಚರಕ್ಕೆ ಪೊಲೀಸ್ ಕಮೀಷನರ್ ಆದೇಶ!
ರಾಜಧಾನಿ ಬೆಂಗಳೂರಿನಲ್ಲಿ ಹೈ ಆಲರ್ಟ್ ಘೋಷಿಸಿ ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಇಂದು ಆದೇಶ ಹೊರಡಿಸಿದ್ದಾರೆ. ಪೊಲೀಸ್ ಅಧಿಕಾರಿಗಳು ಸನ್ನದ ರೀತಿಯಲ್ಲಿ ಇರುವಂತೆ ಅವರು ದಿಢೀರನೇ ಹೈ ಆಲರ್ಟ್ ಘೋಷಿಸಿದ್ದು, ಉಗ್ರರ ಭೀತಿಯ ಅನುಮಾನ ಕಾಡುತ್ತಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹೈ ಆಲರ್ಟ್ ಘೋಷಿಸಿ ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಇಂದು ಆದೇಶ ಹೊರಡಿಸಿದ್ದಾರೆ. ಪೊಲೀಸ್ ಅಧಿಕಾರಿಗಳು ಸನ್ನದ ರೀತಿಯಲ್ಲಿ ಇರುವಂತೆ ಅವರು ದಿಢೀರನೇ ಹೈ ಆಲರ್ಟ್ ಘೋಷಿಸಿದ್ದು, ಉಗ್ರರ ಭೀತಿಯ ಅನುಮಾನ ಕಾಡುತ್ತಿದೆ.
ಆಡಳಿತ ಶಕ್ತಿ ಕೇಂದ್ರ ವಿಧಾನಸೌಧ, ವಿಕಾಸಸೌಧ, ಹೈಕೋರ್ಟ್, ಎಲ್ಲಾ ರೈಲು ನಿಲ್ದಾಣಗಳು, ಬೆಂಗಳೂರು ಮೆಟ್ರೋ, ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ, ಪ್ರತಿಷ್ಠಿತ ಶಾಲೆಗಳು, ಮಾಲ್ ಗಳು, ಪಂಚತಾರಾ ಹೋಟೆಲ್ ಗಳು ಹಾಗೂ ಮಾರ್ಕೆಟ್ ಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದ್ದಾರೆ.
ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ವಾಹನಗಳನ್ನು ಪರಿಶೀಲಿಸುವಂತೆ, ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಸುವಂತೆ, ಮುಂದಿನ ಆದೇಶದವರೆಗೂ ಉನ್ನತಾಧಿಕಾರಿಗಳು ನಿಗಾ ವಹಿಸುವಂತೆ ನಿರ್ದೇಶನ ನೀಡಿದ್ದಾರೆ. ಪ್ರಮುಖ ಸ್ಥಳಗಳಲ್ಲಿ ಎಲ್ಲಾ ಅಧಿಕಾರಿಗಳು ನಿಯಮಿತವಾಗಿ ಗಸ್ತು ತಿರುಗುವಂತೆಯೂ ತಿಳಿಸಿದ್ದಾರೆ.
ಪಿಜಿ ಹಾಸ್ಟೇಲ್ ಗಳು, ಅಪಾರ್ಟ್ ಮೆಂಟ್ ಗಳು, ಧಾರ್ಮಿಕ ಸ್ಥಳಗಳ ಬಳಿಯ ವಸತಿ ಗೃಹಗಳನ್ನು ಪರಿಶೀಲಿಸುವಂತೆ ಭಾಸ್ಕರ ರಾವ್ ಆದೇಶ ಹೊರಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


