ವಿಜಯಪುರ: ಸಾಲದ ಬಾಧೆ ತಾಳದೆ ರೈತ ಆತ್ಮಹತ್ಯೆ
ಸಾಲ ಬಾಧೆ ತಾಳಲಾರದೆ ರೈತನೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಜಟ್ಟಗಿ ಗ್ರಾಮದಲ್ಲಿ ನಡೆದಿದೆ.

ವಿಜಯಪುರ: ಸಾಲ ಬಾಧೆ ತಾಳಲಾರದೆ ರೈತನೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಜಟ್ಟಗಿ ಗ್ರಾಮದಲ್ಲಿ ನಡೆದಿದೆ.
ಬಳಬಟ್ಟಿ ಗ್ರಾಮದ ಮುದ್ದಪ್ಪ ದಡ್ಡಿ(42 ) ಆತ್ಮಹತ್ಯೆಗೆ ಶರಣಾದ ರೈತ. ಇವರಿಗೆ ಹುಲ್ಲೂರದಲ್ಲಿ 4.27 ಎಕರೆ ಜಮೀನಿದ್ದು, ಕಬ್ಬಿನ ಬೆಳೆ ಸರಿಯಾಗಿ ಬಾರದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಯಲಗೂರ ಸಿಂಡಿಕೇಟ್ ಬ್ಯಾಂಕ್ ಶಾಖೆಯಲ್ಲಿ 4.50 ಲಕ್ಷ ರೂ, ಎಲ್ ಆಂಡ್ ಟಿ ಫೈನಾನ್ಸ್ ನಲ್ಲಿ 5.50 ಲಕ್ಷ ರೂ ಹಾಗೂ ಸುಂದರಂ ಫೈನಾನ್ಸ್ ನಲ್ಲಿ 5.5 ಲಕ್ಷ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


