ಬೆಂಗಳೂರು: ಅನಾರೋಗ್ಯದಿಂದ ಬೇಸತ್ತು ಮಹಿಳಾ ಉದ್ಯೋಗಿ ಆತ್ಮಹತ್ಯೆ
ತೀವ್ರ ಅನಾರೋಗ್ಯ ಹಾಗೂ ಆರ್ಥಿಕ ಸಂಕಷ್ಟಕ್ಕೆ ಬೇಸತ್ತು ಮಹಿಳಾ ಉದ್ಯೋಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಸವನಗುಡಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಬೆಂಗಳೂರು: ತೀವ್ರ ಅನಾರೋಗ್ಯ ಹಾಗೂ ಆರ್ಥಿಕ ಸಂಕಷ್ಟಕ್ಕೆ ಬೇಸತ್ತು ಮಹಿಳಾ ಉದ್ಯೋಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಸವನಗುಡಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಖಾಸಗಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಚೈತ್ರಾ(39) ಮೃತ ದುರ್ದೈವಿ. ಪತಿ ಸುರೇಶ್ ಮುದ್ರಣಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇಬ್ಬರು ಹೆಣ್ಣು ಮಕ್ಕಳಿದ್ದಾರೆ ಎಂದು ತಿಳಿದು ಬಂದಿದೆ.
ಕೆಆರ್ ರಸ್ತೆಯ ಎದುರಿನ ಗರಡಿ ಅಪಾರ್ಟ್ ಮೆಂಟ್ ನಲ್ಲಿ ಶುಕ್ರವಾರ ರಾತ್ರಿ ಚೈತ್ರಾ ನೇಣಿಗೆ ಶರಣಾಗಿದ್ದಾರೆ.
ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು, ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


