ರಾಜ್ಯ

ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ 4 ಸಾವಿರ ರೂ. ನೆರವು ನೀಡಲು ಸರ್ಕಾರ ಆದೇಶ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಹೆಚ್ಚುವರಿಯಾಗಿ 4 ಸಾವಿರ ರೂಪಾಯಿ ನೆರವು ನೀಡಲು ಸರ್ಕಾರ ಆದೇಶ ಹೊರಡಿಸಿದೆ. ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಎರಡು ಕಂತುಗಳಲ್ಲಿ ಹಣ ವರ್ಗಾವಣೆ ಮಾಡುವಂತೆ ಸರ್ಕಾರ ಶನಿವಾರ ಆದೇಶಿಸಿದೆ.

ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ 4 ಸಾವಿರ ರೂ. ನೆರವು ನೀಡಲು ಸರ್ಕಾರ ಆದೇಶ
Published On :

ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಹೆಚ್ಚುವರಿಯಾಗಿ 4 ಸಾವಿರ ರೂಪಾಯಿ ನೆರವು ನೀಡಲು ಸರ್ಕಾರ ಆದೇಶ ಹೊರಡಿಸಿದೆ. ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಎರಡು ಕಂತುಗಳಲ್ಲಿ ಹಣ ವರ್ಗಾವಣೆ ಮಾಡುವಂತೆ ಸರ್ಕಾರ ಶನಿವಾರ ಆದೇಶಿಸಿದೆ. 

ಯೋಜನೆಯನ್ನು ಅನುಷ್ಠಾನಗೊಳಿಸಲು ಅಗತ್ಯವಾದ ಹಣವನ್ನು ಆಕಸ್ಮಿಕ ನಿಧಿಯಿಂದ ಪಡೆಯಲಾಗುತ್ತದೆ ಮತ್ತು 2019-20ರ ಪೂರಕ ಬಜೆಟ್ ಹಂಚಿಕೆಗಳಲ್ಲಿ ಮರುಹೊಂದಿಸಲಾಗುತ್ತದೆ ಎಂದು ಸರ್ಕಾರದ ಮೂಲಗಳಿಂದ ತಿಳಿದುಬಂದಿದೆ.

ಕೃಷಿ ಇಲಾಖೆಯ ನಿರ್ದೇಶಕರು ಈ ಯೋಜನೆಯಡಿ  ವಿತರಣಾ ಅಧಿಕಾರಿಯಾಗಿರುತ್ತಾರೆ ಮತ್ತು ಹಣಕಾಸು ಇಲಾಖೆ ಆದೇಶ ಹೊರಡಿಸಿದ ನಂತರ ಅಧಿಕಾರಿಯು ಫಂಡ್ ನ್ನು ಡ್ರಾ ಮಾಡಿಕೊಳ್ಳಬಹುದಾಗಿದೆ. 

ಪ್ರಧಾನಮಂತ್ರಿ ಕೃಷಿ ಸಮ್ಮಾನ್ ಯೋಜನೆಯಡಿ ರೈತರಿಗೆ ಮೂರು ಕಂತುಗಳಲ್ಲಿ ವರ್ಷಕ್ಕೆ 6 ಸಾವಿರ ರೂ. ನೀಡಲಾಗುತ್ತಿದೆ. ಇದೀಗ ಹೆಚ್ಚುವರಿಯಾಗಿ ರಾಜ್ಯಸರ್ಕಾರದಿಂದ ಎರಡು ಕಂತುಗಳಲ್ಲಿ ತಲಾ 2 ಸಾವಿರ ರೂಪಾಯಿತಂತೆ 4 ಸಾವಿರ ರೂ. ಗಳನ್ನು ರೈತರ ಖಾತೆಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.