ರಾಜ್ಯ

ಬಳ್ಳಾರಿ: ಕಾರು ಅಪಘಾತ, ಶಾಸಕ ಭೀಮಾನಾಯ್ಕ್ ಪುತ್ರನಿಗೆ ಗಾಯ

ಕಾರು ಹಾಗೂ ಟಂಟಂ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ಶಾಸಕ ಭೀಮಾನಾಯ್ಕ್ ಅವರ ಪುತ್ರ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಹೊಸಪೇಟೆಯ ಮರಿಯಮ್ಮನಹಳ್ಳಿ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 50ರ ಎಂಎಸ್‌ಪಿಎಲ್‌ ಕ್ರಾಸ್‌ ನಲ್ಲಿ ನಡೆದಿದೆ.

ಬಳ್ಳಾರಿ: ಕಾರು ಅಪಘಾತ, ಶಾಸಕ ಭೀಮಾನಾಯ್ಕ್ ಪುತ್ರನಿಗೆ ಗಾಯ
ಬಳ್ಳಾರಿ: ಕಾರು ಅಪಘಾತ, ಶಾಸಕ ಭೀಮಾನಾಯ್ಕ್ ಪುತ್ರನಿಗೆ ಗಾಯ
Published On :

ಬಳ್ಲಾರಿ: ಕಾರು ಹಾಗೂ ಟಂಟಂ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ಶಾಸಕ ಭೀಮಾನಾಯ್ಕ್ ಅವರ ಪುತ್ರ ಸೇರಿದಂತೆ ಇಬ್ಬರಿಗೆ ಗಂಭೀರ  ಗಾಯವಾಗಿರುವ ಘಟನೆ ಹೊಸಪೇಟೆಯ ಮರಿಯಮ್ಮನಹಳ್ಳಿ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 50ರ ಎಂಎಸ್‌ಪಿಎಲ್‌ ಕ್ರಾಸ್‌ ನಲ್ಲಿ ನಡೆದಿದೆ.

ಹಗರಿಬೊಮ್ಮನಹಳ್ಳಿ ಕಾಂಗ್ರೆಸ್ ಶಾಸಕ ಭೀಮಾನಾಯ್ಕ್ ಪುತ್ರ ಅಶೋಕ್ ಅಪಘಾತದಿಂದ ಗಂಭೀರ ಗಾಯಗೊಂಡಿದ್ದಾರೆ. ಅಲ್ಲದೆ ಟಂಟಂ ಚಾಲಕನಿಗೂ ಸಹ ಗಾಯಗಳಾಗಿದೆ.

ಶಾಸಕರ ಪುತ್ರ ಅಶೋಕ್ ಜಿಂದಾಲ್ ವಿಮಾನ ನಿಲ್ದಾಣಕ್ಕಾಗಿ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಏರ್ ಬಲೂನ್ ತಕ್ಷಣ ತೆರೆದುಕೊಂಡ ಕಾರಣ ಅಶೋಕ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಧ್ಯ ಶಾಸಕರ ಪುತ್ರ ಹೊಸಪೇಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಘಟನೆ ಕುರಿತಂತೆ ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.