ಕೆಪಿಎಸ್‌ಸಿ ಅಧ್ಯಕ್ಷರಾಗಿ ನಿವೃತ್ತ ಐಎಎಸ್ ಅಧಿಕಾರಿ ಎಸ್.ಪಿ.ಷಡಕ್ಷರಿ ಸ್ವಾಮಿ ನೇಮಕ
ಕರ್ನಾಟಕ ಲೋಕಸೇವಾ ಆಯೋಗದ(ಕೆಪಿಎಸ್‌ಸಿ) ನೂತನ ಅಧ್ಯಕ್ಷರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಎಸ್.ಪಿ. ಷಡಾಕ್ಷರಿ ಸ್ವಾಮಿ ನೇಮಕವಾಗಿದ್ದಾರೆ.

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ(ಕೆಪಿಎಸ್‌ಸಿ) ನೂತನ ಅಧ್ಯಕ್ಷರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಎಸ್.ಪಿ. ಷಡಕ್ಷರಿ ಸ್ವಾಮಿ ನೇಮಕವಾಗಿದ್ದಾರೆ.
ರಾಜ್ಯ ಸರ್ಕಾರದ ಶಿಫಾರಸಿನ ಅನ್ವಯ ರಾಜ್ಯಪಾಲರು ನೂತನ ಅಧ್ಯಕ್ಷರ ನೇಮಕ ಮಾಡಿ ಆದೇಶಿಸಿದ್ದಾರೆ.
ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಕೆಪಿಎಸ್‌ಸಿಅಧ್ಯಕ್ಷರಾಗಿದ್ದ ಶ್ಯಾಮ್ ಭಟ್ ಅವರ ಆವಧಿ ಕಳೆದ ಡಿಸೆಂಬರ್ ನಲ್ಲಿ ಮುಕ್ತಾಯವಾಗಿದ್ದು ಅಲ್ಲಿಂದೀಚೆಗೆ ಅಧ್ಯಕ್ಷ ಪದವಿ ಖಾಲಿಯಾಗಿಯೇ ಉಳಿದಿತ್ತು. ಆ ಬಳಿಕ ಅಧಿಕಾರಕ್ಕೇರಿದ ಕುಮಾರಸ್ವಾಮಿ ಅವರ ಸಮ್ಮಿಶ್ರ ಸರ್ಕಾರ ಷಡಕ್ಷರಿ ಸ್ವಾಮಿ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ಇದೀಗ ಅವರೇ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ.
ಷಡಕ್ಷರಿ ಸ್ವಾಮಿ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಸಹೋದರರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


