ದೇವರಾಜ ಅರಸು ಜನ್ಮದಿನ: ಸಿಎಂ ಯಡಿಯೂರಪ್ಪ ಸೇರಿ ಗಣ್ಯರಿಂದ ಸ್ಮರಣೆ
ದಿವಂಗತ ಮಾಜಿ ಮುಖ್ಯಮಂತ್ರಿ, ಸಾಮಾಜಿಕ ಸಮಾನತೆಯ ಹರಿಕಾರ ದೇವರಾಜ್ ಅರಸು ಅವರ ಜಯಂತಿ ಅಂಗವಾಗಿ ಅವರ ಪುತ್ಥಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

ಬೆಂಗಳೂರು: ದಿವಂಗತ ಮಾಜಿ ಮುಖ್ಯಮಂತ್ರಿ, ಸಾಮಾಜಿಕ ಸಮಾನತೆಯ ಹರಿಕಾರ ದೇವರಾಜ್ ಅರಸು ಅವರ ಜಯಂತಿ ಅಂಗವಾಗಿ ಅವರ ಪುತ್ಥಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಅರಸು ನಾಡು ಕಂಡ ಧೀಮಂತ, ಮೇಧಾವಿ ರಾಜಕಾರಣಿ. ಹಿಂದುಳಿದ ವರ್ಗಗಳ ಪರವಾಗಿ ಕಾಳಜಿ ಹೊಂದಿದ್ದ ಅವರು, ಸಮಾಜಕ್ಕೆ ಮಾಡಿರುವ ಕಾರ್ಯಗಳು ಅಚ್ಚಳಿಯದೆ ಉಳಿದಿವೆ. ಪ್ರಮುಖವಾಗಿ ಭೂ ಸುಧಾರಣಾ ಕಾಯ್ದೆ , ಕರ್ನಾಟಕ ಋಣಮುಕ್ತ ಕಾಯ್ದೆ ತಂದು ಬಡವರ ಪರವಾದ ಯೋಜನೆಗಳನ್ನು ಜಾರಿಗೆ ತಂದು ಜನರಿಗೆ ಅನುಕೂಲ ಮಾಡಿಕೊಟ್ಟಿದ್ದರು. ಅವರು ಈ ನಾಡಿಗೆ ಕೊಟ್ಟಂತಹ ಸೇವೆ, ಜಾರಿಗೆ ತಂದ ಕಾರ್ಯಕ್ರಮ ಯಾರೂ ಮರೆಯಲು ಸಾಧ್ಯವಿಲ್ಲ ಎಂದು ಸ್ಮರಿಸಿದರು.
ಇನ್ನು ವಿರೋಧ ಪಕ್ಷದ ಪ್ರಮುಖ ನಾಯಕರಾದ ಸಿದ್ದರಾಮಯ್ಯ, ಮಾಜಿ ಸಿಎಂ ಎಚ್,ಡಿ. ಕುಮಾರಸ್ವಾಮಿ ಸಹ ಟ್ವೀಟ್ ಮೂಲಕ ಅರಸು ಅವರ ಸ್ಮರಣೆ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


