ಕಲಬುರ್ಗಿ: ಕೊಲೆ ವಿಚಾರ ಪೋಲೀಸರಿಗೆ ತಿಳಿಯಿತೆಂದು ಹೆದರಿ ಆತ್ಮಹತ್ಯೆಗೆ ಶರಣಾದ ಆರೋಪಿ!
ಮಹಿಳೆಯೋರ್ವಳನ್ನು ಕೊಲೆ ಮಾಡಿ, ಚಿನ್ನಾಭರಣ ದೋಚಿರುವ ವಿಚಾರ ಪೊಲೀಸರಿಗೆ ತಿಳಿಯಿತು ಎಂಬ ಭಯದಿಂದ ಆರೋಪಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಸ್ಟೇಶನ್ ಗಾಣಗಾಪುರ ಗ್ರಾಮದಲ್ಲಿ ನಡೆದಿದೆ.

ಕಲಬುರಗಿ: ಮಹಿಳೆಯೋರ್ವಳನ್ನು ಕೊಲೆ ಮಾಡಿ, ಚಿನ್ನಾಭರಣ ದೋಚಿರುವ ವಿಚಾರ ಪೊಲೀಸರಿಗೆ ತಿಳಿಯಿತು ಎಂಬ ಭಯದಿಂದ ಆರೋಪಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಸ್ಟೇಶನ್ ಗಾಣಗಾಪುರ ಗ್ರಾಮದಲ್ಲಿ ನಡೆದಿದೆ.
ಸ್ಟೇಶನ್ ಗಾಣಗಾಪುರದ ನಿವಾಸಿ ಪೋಸಯ್ಯ ಕಲ್ಯಾಣಕರ್ (28) ಮೃತ ಆರೋಪಿ. ನೀಲೂರು ಗ್ರಾಮದ 40 ವರ್ಷದ ಗೃಹಿಣಿ ಲಕ್ಷ್ಮೀಬಾಯಿ ಎಂಬುವವರು ಬುಧವಾರ ನಸುಕಿನ ಜಾವ ಬಹಿರ್ದೆಸೆಗಾಗಿ ಮನೆಯಿಂದ ಊರಾಚೆಗೆ ತೆರಳಿದ್ದರು. ಅವರ ಮೈಮೇಲಿನ ಒಡವೆ ಗಮನಿಸಿದ ಆರೋಪಿ ಪೋಸಯ್ಯ, ಅವರನ್ನು ಹಿಂಬಾಲಿಸಿ ನಿರ್ಜನ ಪ್ರದೇಶದಲ್ಲಿ ಕೊರಳಿಗೆ ಹಗ್ಗ ಹಾಕಿ ಮುಳ್ಳಿನ ಪೊದೆಯಲ್ಲಿ ಎಳೆದೊಯಿದು ತಲೆ ಮೇಲೆ ಕಲ್ಲು ಎತ್ತು ಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದ. ಬಳಿಕ ಅವರು ಧರಿಸಿದ್ದ ಚಿನ್ನಾಭರಣಗಳನ್ನು ದೋಚಿ ನೇರವಾಗಿ ಸ್ವಂತ ಊರು ಸ್ಟೇಷನ್ ಗಾಣಗಾಪುರಕ್ಕೆ ತೆರಳಿದ್ದನು.
ನಂತರ ಈ ವಿಚಾರ ಪೊಲೀಸರಿಗೆ ತಿಳಿದಿದೆ ಎನ್ನುವುದು ಗೊತ್ತಾಗಿ ಬುಧವಾರ ರಾತ್ರಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪೋಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದ್ದು ಘಟನೆ ಕುರಿತಂತೆ ರೇವೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


