ಭೂಕುಸಿತದಿಂದಾಗಿ ಏಳು ರೈಲುಗಳನ್ನು ರದ್ದುಗೊಳಿಸಿದ ನೈಋತ್ಯ ರೈಲ್ವೆ
ಸಕಲೇಶಪುರ-ಸುಬ್ರಮಣ್ಯ ರಸ್ತೆ ಘಾಟ್ ವಿಭಾಗದ ನಡುವೆ ವಿವಿಧ ಸ್ಥಳಗಳಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಮೈಸೂರು ವಿಭಾಗದಲ್ಲಿ ಏಳು ರೈಲುಗಳನ್ನು ರದ್ದುಪಡಿಸುವುದಾಗಿ ನೈಋತ್ಯ ರೈಲ್ವೆ ಪ್ರಕಟಿಸಿದೆ.

ಬೆಂಗಳೂರು: ಸಕಲೇಶಪುರ-ಸುಬ್ರಮಣ್ಯ ರಸ್ತೆ ಘಾಟ್ ವಿಭಾಗದ ನಡುವೆ ವಿವಿಧ ಸ್ಥಳಗಳಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಮೈಸೂರು ವಿಭಾಗದಲ್ಲಿ ಏಳು ರೈಲುಗಳನ್ನು ರದ್ದುಪಡಿಸುವುದಾಗಿ ನೈಋತ್ಯ ರೈಲ್ವೆ (ಎಸ್‌ಡಬ್ಲ್ಯುಆರ್) ಗುರುವಾರ ಪ್ರಕಟಿಸಿದೆ.
ಆಗಸ್ಟ್ 24 ರಂದು ಕಾರವಾರನಿಂದ ಪ್ರಯಾಣ ಪ್ರಾರಂಭಿಸಬೇಕಿದ್ದ ರೈಲು ಸಂಖ್ಯೆ 16516 ಕಾರವಾರ್-ಯಶವಂತಪುರ ಎಕ್ಸ್‌ಪ್ರೆಸ್, ರೈಲು ಸಂಖ್ಯೆ 16518/16524 ಕಣ್ಣೂರು / ಕಾರವಾರ್ - ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್ ರದ್ದುಗೊಂಡಿದೆ. ಆಗಸ್ಟ್ 23 ಮತ್ತು 24 ರಂದು ಕೆಎಸ್‌ಆರ್ ಬೆಂಗಳೂರಿನಿಂದ ಪ್ರಯಾಣ ಪ್ರಾರಂಭಿಸಬೇಕಿದ್ದ ಕೆಎಸ್‌ಆರ್ ಬೆಂಗಳೂರು - ಕಣ್ಣೂರು / ಕಾರ್ವಾರ್ ಎಕ್ಸ್‌ಪ್ರೆಸ್ ರೈಲನ್ನು ರದ್ದುಗೊಳಿಸಲಾಗಿದೆ ಎಂದು ಎಸ್‌ಡಬ್ಲ್ಯುಆರ್ ಪ್ರಕಟಣೆ ತಿಳಿಸಿದೆ. ಆ.25ರ ಯಶವಂತಪುರ - ಮಂಗಳೂರು ಮಾರ್ಗದ ರೈಲು ಕೂಡ ರದ್ದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


