ರಾಜ್ಯ

ಮಂಗಳೂರು: ಮಾಜಿ ಸಚಿವ ಎ.ರಾಮದಾಸ್ ಕಾರು ಅಪಘಾತ!

ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ರಾಮದಾಸ್ ಅವರ ಕಾರು ಜಾಲ್ಸೂರಿನಲ್ಲಿ ರಸ್ತೆ ಪಕ್ಕದ ಮೋರಿಗೆ ಡಿಕ್ಕಿ ಹೊಡೆದ ಘಟನೆ ಇಂದು ಮುಂಜಾನೆ ನಡೆದಿದೆ.

ಮಂಗಳೂರು: ಮಾಜಿ ಸಚಿವ ಎ.ರಾಮದಾಸ್ ಕಾರು ಅಪಘಾತ!
ಎಸ್.ಎ ರಾಮದಾಸ್
Published On :

ಸುಳ್ಯ: ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ರಾಮದಾಸ್ ಅವರ ಕಾರು ಜಾಲ್ಸೂರಿನಲ್ಲಿ ರಸ್ತೆ ಪಕ್ಕದ ಮೋರಿಗೆ ಡಿಕ್ಕಿ ಹೊಡೆದ ಘಟನೆ ಇಂದು ಮುಂಜಾನೆ ನಡೆದಿದೆ.

ಶಾಸಕ ರಾಮದಾಸ್ ಅವರು ಮೈಸೂರಿನಿಂದ ಸುಳ್ಯ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಕಾರು ಜಾಲ್ಸೂರಿನ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿಗೆ ಮುಂಜಾನೆ 7.15ರ ಸುಮಾರಿಗೆ ತಲುಪಿದಾಗ ಕಾರು ಚಾಲಕನಿಗೆ ನಿದ್ರೆ ಆವರಿಸಿದ ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ಗೇಟಿನ ಬಳಿಯಿರುವ ಮೋರಿಗೆ ಡಿಕ್ಕಿ ಹೊಡೆಯಿತು. ಪರಿಣಾಮ ಕಾರಿನ ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಶಾಸಕ ರಾಮದಾಸ್ ಅವರಿಗೆ ಸ್ವಲ್ಪ ಮಟ್ಟಿನ ಗಾಯಗೊಂಡರು.

ಈ ಸಂದರ್ಭದಲ್ಲಿ ಅಲ್ಲಿಯೇ ಸಮೀಪದ ಪೆಟ್ರೊಲ್ ಪಂಪ್ ನಲ್ಲಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರ ಸಹೋದರ ದಿ. ಭಾಸ್ಕರ ಗೌಡರ ಪುತ್ರ ಆಶಿಕ್ ಅವರು ಶಾಸಕ ರಾಮ್ ದಾಸ್ ಅವರನ್ನು ತಮ್ಮ ಕಾರಿನಲ್ಲಿ ಸುಳ್ಯದ ಆಸ್ಪತ್ರೆ ಕರೆತಂದರು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.