ಬೇರೆ ಬೇರೆ ಜೈಲುಗಳಿಗೆ ಗೌರಿ ಲಂಕೇಶ್ ಹಂತಕರ ಸ್ಥಳಾಂತರ
ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿದ ನಾಲ್ವರನ್ನು ಹಂತಕರನ್ನು ರಾಜ್ಯದಲ್ಲಿನ ಬೇರೆ ಬೇರೆ ಜೈಲುಗಳಿಗೆ ಸದ್ಯದಲ್ಲಿ ಸ್ಥಳಾಂತರ ಮಾಡಲಾಗುತ್ತಿದೆ.

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿದ ನಾಲ್ವರನ್ನು ಹಂತಕರನ್ನು ರಾಜ್ಯದಲ್ಲಿನ ಬೇರೆ ಬೇರೆ ಜೈಲುಗಳಿಗೆ ಸದ್ಯದಲ್ಲಿ ಸ್ಥಳಾಂತರ ಮಾಡಲಾಗುತ್ತಿದೆ.
ಗೌರಿ ಲಂಕೇಶ್ ಹತ್ಯೆ ಆರೋಪದ ಮೇಲೆ ಬಂಧಿಸಲಾಗಿರುವ ಅಮೋಲ್ ಕಾಳೆ, ಪರಶುರಾಮ್ ವಾಗ್ಮೋರೆ, ಮನೋಹರ್ ಎಡಾವೆ, ಮತ್ತು ಅಮಿತ್ ದಿಗ್ವೀಕರ್ ಅವರನ್ನು ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರ ಮಾಡಬೇಕೆಂದು ಪರಪ್ಪನ ಅಗ್ರಹಾರ ಕಾರಾಗೃಹದ ಅಧಿಕಾರಿಗಳು ವಿಶೇಷ ನ್ಯಾಯಾಲಯದ ಬಳಿ ಮನವಿ ಮಾಡಿಕೊಂಡಿದ್ದಾರೆ.
ಆರೋಪಿಗಳ ಜೀವಕ್ಕೆ ಬೆದರಿಕೆ ಇರುವುದರಿಂದ ಎಲ್ಲರನ್ನೂ ಒಂದೇ ಜೈಲಿನಲ್ಲಿಡುವುದು ಸರಿಯಲ್ಲ, ಸಾಕ್ಷ್ಯ ನಾಶಕ್ಕೂ ಯತ್ನಿಸಬಹುದು. ಈ ಹಿನ್ನೆಲೆಯಲ್ಲಿ ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರ ಮಾಡುವುದು ಉತ್ತಮ ಎಂದು ಜೈಲು ಅಧಿಕಾರಿಗಳು ಹೇಳಿದ್ದಾರೆ.
ಆರೋಪಿ ಕಾಳೆ -ಮೈಸೂರು ಜೈಲಿಗೆ, ವಾಗ್ಮೋರೆ- ತುಮಕೂರು ಎಡಾವೆ- ಶಿವಮೊಗ್ಗ ಅಮಿತ್ ದಿಗ್ವೇಕರ್ - ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಎಡಿಜಿಪಿ ಎನ್ ಎಸ್ ಮೇಘರಿಕ್ ಆದೇಶ ಹೊರಡಿಸಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


