ಹಿರಿಯ ಪೊಲೀಸ್ ಅಧಿಕಾರಿ ಆರ್ ರಮೇಶ್ ವಿಧಿ ವಶ
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಪೊಲೀಸ್ ಕೇಂದ್ರ ಯೋಜನೆ ಮತ್ತು ಆಧುನೀಕರಣ ವಿಭಾಗದ ಉಪ ಉಪ ಪೊಲೀಸ್ ಮಹಾನಿರೀಕ್ಷಕ ಆರ್ ರಮೇಶ್ ನಿಧನರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು.

ಬೆಂಗಳೂರು: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಪೊಲೀಸ್ ಕೇಂದ್ರ ಯೋಜನೆ ಮತ್ತು ಆಧುನೀಕರಣ ವಿಭಾಗದ ಉಪ ಉಪ ಪೊಲೀಸ್ ಮಹಾನಿರೀಕ್ಷಕ ಆರ್ ರಮೇಶ್ ನಿಧನರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು.
ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ನರಳುತ್ತಿದ್ದ ಅವರನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
2017ರಲ್ಲಿ ಡಿಐಜಿ ಹುದ್ದೆಗೆ ಬಡ್ತಿ ಪಡೆದಿದ್ದ ಅವರು, ಗೃಹ ರಕ್ಷಕ ದಳದ ಉಪ ಕಮಾಂಡೆಂಟ್ ಜನರಲ್ ಆಗಿ ಕಾರ್ಯನಿರ್ವಹಿಸಿ, ನಂತರ ಯೋಜನೆ ಮತ್ತು ಆಧುನೀಕರಣ ವಿಭಾಗದ ಡಿಐಜಿಯಾಗಿ ವರ್ಗಾವಣೆಯಾಗಿದ್ದರು.2005ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದ ಆರ್ ರಮೇಶ್, ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


