ಮೈಸೂರು: ಸೆಲ್ಫಿ ಕ್ಲಿಕ್ಕಿಸಿಕೊಂಡ ನಂತರ ಕಪಿಲಾ ನದಿಗೆ ಹಾರಿ ತಾಯಿ-ಮಗಳು ಆತ್ಮಹತ್ಯೆ
ಸೆಲ್ಫಿ ಕ್ಲಿಕ್ಕಿಸಿಕೊಂಡ ಬಳಿಕ ನದಿಗೆ ಹಾರಿ ತಾಯಿ-ಮಗಳು ಕಪಿಲಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೈಸೂರು: ಸೆಲ್ಫಿ ಕ್ಲಿಕ್ಕಿಸಿಕೊಂಡ ಬಳಿಕ ನದಿಗೆ ಹಾರಿ ತಾಯಿ-ಮಗಳು ಕಪಿಲಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬಂಡಿಪಾಳ್ಯ ಗ್ರಾಮದ ನಿವಾಸಿಗಳಾದ ಮುಂಜುಳಾ(38) ಹಾಗೂ ಸೌಮ್ಯ (19) ಆತ್ಮಹತ್ಯೆ ಮಾಡಿಕೊಂಡವರು. ಮನೆಯವರಿಗೆ ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿ ತಾಯಿ, ಮಗಳು ತೆರಳಿದ್ದರು. ಆದರೆ ನದಿಯ ಬಳಿ ಸೆಲ್ಫಿ ಕ್ಲಿಕ್ಕಿಸಿಕೊಂಡ ನಂತರ ನದಿಗೆ ಹಾರಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಾಯಿ, ಮಗಳ ಮೃತದೇಹ ನೀರಿನಲ್ಲಿ ತೇಲುತ್ತಿದ್ದುದನ್ನು ನೋಡಿದ ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಬಂದು ಮೃತದೇಹಗಳನ್ನು ನದಿಯಿಂದ ಹೊರ ತೆಗೆದಿದ್ದಾರೆ. ಸದ್ಯ ತಾಯಿ, ಮಗಳ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


