ಕಲಬುರಗಿಯಲ್ಲಿ ಭೀಕರ ಅಪಘಾತ: ರಸ್ತೆಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಐವರ ದುರ್ಮರಣ
2 ಮತ್ತು 3 ವರ್ಷದ ಮಕ್ಕಳು ಸೇರಿದಂತೆ ಐವರು ರಸ್ತೆ ಅಪಘಾತದಲ್ಲಿ ದಾರುಣ ಸಾವನ್ನಪ್ಪಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಕಲಬುರಗಿ: 2 ಮತ್ತು 3 ವರ್ಷದ ಮಕ್ಕಳು ಸೇರಿದಂತೆ ಐವರು ರಸ್ತೆ ಅಪಘಾತದಲ್ಲಿ ದಾರುಣ ಸಾವನ್ನಪ್ಪಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಕಲಬುರಗಿ ತಾಲೂಕಿನ ಸಾವಳಗಿ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಕಾರು ನುಚ್ಚುನೂರಾಗಿದ್ದು ಅಪಘಾತದ ತೀವ್ರತೆಗೆ ಘಟನಾ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ. ಇನ್ನು ಮೂವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ಸಂಜಯ್ ಕುಮಾರ್ ಚಡಚಣ(29), ರಾಣಿ ಸಂಜಯ್ ಚಡಚಣ(26), ಶ್ರೇಯಸ್ ಸಂಜಯ್ ಕುಮಾರ್ ಚಡಚಣ(3), ಭಾಗ್ಯಶ್ರೀ ಭೀಮಾಶಂಕರ್ ಅಲಗಿ(23) ಮತ್ತು ಧೀರಜ್ ಸಂಗಣ್ಣ(2) ಎಂದು ಗುರುತಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


