ಗಣೇಶ ಚತುರ್ಥಿಗೆ ಕೆಎಸ್ ಆರ್ ಟಿಸಿಯಿಂದ ಹೆಚ್ಚುವರಿ ಬಸ್ ಸೌಲಭ್ಯ: ಮುಂಗಡ ಬುಕ್ಕಿಂಗ್ ಗೆ ರಿಯಾಯಿತಿ
ಗೌರಿ ಗಣೇಶ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್‌ಟಿಸಿ 1800 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದೆ. ಶುಕ್ರವಾರ ಮತ್ತು ಶನಿವಾರ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳು ಮತ್ತು ಅಕ್ಕ-ಪಕ್ಕದ ರಾಜ್ಯಗಳಿಗೆ ಈ ಬಸ್‌ಗಳು ಸಂಚಾರ ನಡೆಸಲಿವೆ.

ಬೆಂಗಳೂರು: ಗೌರಿ ಗಣೇಶ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್‌ಟಿಸಿ 1800 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದೆ.
ಶುಕ್ರವಾರ ಮತ್ತು ಶನಿವಾರ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳು ಮತ್ತು ಅಕ್ಕ-ಪಕ್ಕದ ರಾಜ್ಯಗಳಿಗೆ ಈ ಬಸ್‌ಗಳು ಸಂಚಾರ ನಡೆಸಲಿವೆ. ಜತೆಗೆ ರಾಜ್ಯ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ 2/9/2019 ರಂದು ವಿಶೇಷ ವಾಹನಗಳು ಸಂಚರಿಸಲಿವೆ ಎಂದು ಸಂಸ್ಥೆ ತಿಳಿಸಿದೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ,ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಗೆ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ.
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ ಸಂಚಾರ ಮಾಡಲಿವೆ.
ಬೆಂಗಳೂರು ನಗರದ ಶ್ರೀ ಬಸವೇಶ್ವರ ಬಸ್ ನಿಲ್ದಾಣ, ವಿಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್(ರಾಜಾಜಿನಗರ), ಮಲ್ಲೇಶ್ವರಂ 8ನೇ ಅಡ್ಡ ರಸ್ತೆ, ಬನಶಂಕರಿ, ಜೀವನ್ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ, ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆಸುಬ್ರಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.
ಇನ್ನೂ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, ಮುಂಗಡ ಬುಕ್ಕಿಂಗ್ ರಿಯಾಯಿತಿ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


