ಬೆಂಗಳೂರಿನ ವಿಶ್ವವಿದ್ಯಾನಿಲಯಗಳಿಗೆ ಇಲ್ಲ ಪ್ರಧಾನಿಯ ಫಿಟ್ ಇಂಡಿಯಾ ಮೂಮೆಂಟ್!
ಆ.29 ರಂದು ರಾಷ್ಟ್ರಾದ್ಯಂತ ಫಿಟ್ ಇಂಡಿಯಾ ಮೂಮೆಂಟ್ ಗೆ ಚಾಲನೆ ದೊರೆಯಲಿದೆ. ಆದರೆ ಬೆಂಗಳೂರು ವಿಶ್ವವಿದ್ಯಾನಿಲಯಗಳಿಗೆ ಮಾತ್ರ ಇದು ಸದ್ಯಕ್ಕೆ ಲಭ್ಯವಿಲ್ಲ.

ಬೆಂಗಳೂರು: ಆ.29 ರಂದು ರಾಷ್ಟ್ರಾದ್ಯಂತ ಫಿಟ್ ಇಂಡಿಯಾ ಮೂಮೆಂಟ್ ಗೆ ಚಾಲನೆ ದೊರೆಯಲಿದೆ. ಆದರೆ ಬೆಂಗಳೂರು ವಿಶ್ವವಿದ್ಯಾನಿಲಯಗಳಿಗೆ ಮಾತ್ರ ಇದು ಸದ್ಯಕ್ಕೆ ಲಭ್ಯವಿಲ್ಲ.
ಫಿಟ್ ಇಂಡಿಯಾ ಮೂಮೆಂಟ್ ಗೆ ಅಗತ್ಯವಿರುವ ಯಾವುದೇ ಮೂಲಸೌಕರ್ಯ ತ್ರಿಭಜನೆಯಾಗಿರುವ ವಿಶ್ವವಿದ್ಯಾನಿಲಯಗಳಿಗೆ ಇನ್ನಷ್ಟೇ ಸಿಗಬೇಕಿದೆ. ವಿಶ್ವವಿದ್ಯಾನಿಲಯಗಳ ಧನಸಹಾಯ ಆಯೋಗ (ಯುಜಿಸಿ) ಪ್ರಧಾನಿ ನರೇಂದ್ರ ಮೋದಿ ಅವರ ಫಿಟ್ ಇಂಡಿಯಾ ಮೂಮೆಂಟ್ ನ್ನು ಬೆಂಬಲಿಸುವಂತೆ ಎಲ್ಲಾ ವಿಶ್ವವಿದ್ಯಾನಿಲಯಗಳಿಗೆ ಮನವಿ ಮಾಡಿದೆ.
ಈ ಬಗ್ಗೆ ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಉಪಕುಲಪತಿ ಟಿಡಿ ಕೆಂಪರಾಜು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ಮಾತನಾಡಿದ್ದು, ಎರಡು ಕೊಠಡಿಯಲ್ಲಿ ಒಳಾಂಗಣ ಕ್ರೀಡಾ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಉಳಿದ ಕ್ರೀಡಾ ಮೂಲಸೌಕರ್ಯಗಳಿಗೆ ನಾವು ಸಜ್ಜುಗೊಳ್ಳಬೇಕಿದೆ. ಇದಕ್ಕಾಗಿ ಸರ್ಕಾರದ ಸಹಾಯವನ್ನು ಎದುರು ನೋಡುತ್ತಿದ್ದೇವೆ ಎಂದು ಹೇಳಿದ್ದಾರೆ.
ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣ ವೀಕ್ಷಿಸಲು ಅವಕಾಶ ನೀಡಲಾಗಿದೆ. ಆದರೆ ಮೂಲಸೌಕರ್ಯ ಕೊರತೆ ಇರುವುದರಿಂದ ಕ್ರೀಡಾ ಚಟುವಟಿಕೆಗಳು ನಡೆಯುವುದಕ್ಕೆ ಸಾಧ್ಯವಿಲ್ಲ, ಇನ್ನಷ್ಟು ಕಾಲ ಕಾಯಬೇಕೆಂದು ವಿವಿ ಅಧಿಕಾರಿಗಳು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


