ರಾಜ್ಯ

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ಮೋಹನ್ ಲಿಂಬಿಕಾಯಿ ನೇಮಕ 

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಹಿರಿಯ ವಕೀಲ ಮೋಹನ್ ಲಿಂಬಿಕಾಯಿ ಅವರನ್ನು ನೇಮಕ ಮಾಡಲಾಗಿದೆ.

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ಮೋಹನ್ ಲಿಂಬಿಕಾಯಿ ನೇಮಕ 
ಮೋಹನ್ ಲಿಂಬಿಕಾಯಿ-ಯಡಿಯೂರಪ್ಪ
Published On :

ಬೆಂಗಳೂರು: ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಹಿರಿಯ ವಕೀಲ ಮೋಹನ್ ಲಿಂಬಿಕಾಯಿ ಅವರನ್ನು ನೇಮಕ ಮಾಡಲಾಗಿದೆ. 

ಹುಬ್ಬಳ್ಳಿ-ಧಾರವಾಡ ಜಿಲ್ಲೆಯ ಗೋಕುಲ ರಸ್ತೆ ನಿವಾಸಿ ಮೋಹನ ಆ.ಲಿಂಬಿಕಾಯಿ ಅವರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶದಲ್ಲಿ ತಿಳಿಸಿದೆ. ಲಿಂಬಿಕಾಯಿ ಅವರು ಬಿ.ಎಸ್.ಯಡಿಯೂರಪ್ಪ, ಕೆಜೆಪಿ ಪಕ್ಷಕ್ಕೆ ಹೋಗಿದ್ದಾಗ ಬಿಜೆಪಿ ತೊರೆದು ಕೆಜೆಪಿಗೆ ಹೋಗಿದ್ದರು. ಬಳಿಕ ಅವರು ಬಿಜೆಪಿಗೆ ಮರಳಿದ್ದರು. ಪಶ್ಚಿಮ ಪದವೀಧರ ಕ್ಷೇತ್ರದಿಂದ ಬಿಜೆಪಿಯ ವಿಧಾನ ಪರಿಷತ್ ಸದಸ್ಯರಾಗಿ ಅವರು ಸೇವೆ ಸಲ್ಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.