ರಾಜ್ಯ

ಉಡುಪಿ: ಕಾರುಗಳ ಮಧ್ಯೆ ಭೀಕರ ಅಪಘಾತ: ಓರ್ವ ಸಾವು

ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಬೈಂದೂರು ‌ತಾಲೂಕಿನ ನಾಯ್ಕನಕಟ್ಟೆ ಎಂಬಲ್ಲಿ ನಡೆದಿದೆ.

ಉಡುಪಿ: ಕಾರುಗಳ ಮಧ್ಯೆ ಭೀಕರ ಅಪಘಾತ: ಓರ್ವ ಸಾವು
ಉಡುಪಿ: ಕಾರುಗಳ ಮಧ್ಯೆ ಭೀಕರ ಅಪಘಾತ: ಓರ್ವ ಸಾವು
Published On :

ಉಡುಪಿ: ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಬೈಂದೂರು ‌ತಾಲೂಕಿನ ನಾಯ್ಕನಕಟ್ಟೆ ಎಂಬಲ್ಲಿ ನಡೆದಿದೆ.

ಭಟ್ಕಳ ಮೂಲದ 48 ವರ್ಷದ ನೂರುಲ್ ಅಮೀನ್ ಮೃತ ದುರ್ದೈವಿ. ಇವರು ಮಂಗಳೂರಿನಿಂದ ಭಟ್ಕಳಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಡಿವೈಡರ್ ಮೇಲೇರಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಇನ್ನೊಂದು ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಘಟನೆಗೆ ಸಂಬಂಧಿಸಿದಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.