ಹೊಸಪೇಟೆ: ಅನರ್ಹ ಶಾಸಕ ಆನಂದ್ ಸಿಂಗ್ ಪುತ್ರನ ಅದ್ದೂರಿ ವಿವಾಹ
ಅನರ್ಹ ಶಾಸಕ, ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಅವರ ಪುತ್ರ ಸಿದ್ದಾರ್ಥ ಹಾಗೂ ಉದ್ಯಮಿ ಪ್ರಭು ಸಬರದ ಅವರ ಮಗಳು ಸಂಜನಾ ಅವರ ವೈಭವೋಪೇತ ವಿವಾಹ ನಡೆದಿದ್ದು, ಜನಸಾಗರವೇ ಹರಿದು ಬರುತ್ತಿದೆ.

ಹೊಸಪೇಟೆ: ಅನರ್ಹ ಶಾಸಕ, ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಅವರ ಪುತ್ರ ಸಿದ್ದಾರ್ಥ ಹಾಗೂ ಉದ್ಯಮಿ ಪ್ರಭು ಸಬರದ ಅವರ ಮಗಳು ಸಂಜನಾ ಅವರ ವೈಭವೋಪೇತ ವಿವಾಹ ನಡೆದಿದ್ದು, ಜನಸಾಗರವೇ ಹರಿದು ಬಂದಿದೆ.
ಆನಂದ್ ಸಿಂಗ್ ಅವರ ಭವ್ಯ ಬಂಗಲೆಯ ಹಿಂಭಾಗದಲ್ಲಿನ 10 ಎಕರೆ ಪ್ರದೇಶದಲ್ಲಿ ಶಾಮಿಯಾನ ಹಾಕಲಾಗಿದ್ದು, ತಿರುಮಲ ತಿರುಪತಿಗೆ ಹೋಲುವ ಅದ್ದೂರಿ ಸೆಟ್ ಹಾಕಲಾಗಿದ್ದು, ಎಲ್ಲರ ಕಣ್ಣು ಕುಕ್ಕುವಂತಿದೆ. ರಜಪೂತ ಸಂಪ್ರದಾಯದಂತೆ ಸಿದ್ದಾರ್ಥ, ವಧು ಸಂಜನಾ ಅವರಿಗೆ ತಾಳಿ ಕಟ್ಟುವ ಕಾರ್ಯಕ್ರಮ ನೆರವೇರಿತು.
ಸುಮಾರು 50 ಸಾವಿರ ಜನರು ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಹಲವು ಗಣ್ಯರು ಬಂದು ನೂತನ ವಧು ವರನನ್ನು ಆಶೀರ್ವದಿಸಿದ್ದಾರೆ. ಚುನಾವಣಾ ಆಯೋಗದ ಅಧಿಕಾರಿಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದ್ದು, ಪ್ರತಿಯೊಂದನ್ನು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


