ಅಮೆರಿಕಾ ಶೂಟೌಟ್'ಗೆ ಬಲಿಯಾದ ಅಭಿಷೇಕ್ ಕುಟುಂಬಕ್ಕೆ ಶೀಘ್ರ ವೀಸಾ
ಅಮೆರಿಕಾದಲ್ಲಿ ಅಪರಿಚತರ ಗುಂಡಿನ ದಾಳಿಗೆ ಬಲಿಯಾದ ಮೈಸೂರು ಯುವಕ ಅಭಿಷೇಕ್ ಅವರ ನಿವಾಸಕ್ಕೆ ಭೇಟಿ ನೀಡಿದ ಸಂಸದ ಪ್ರತಾಪ್ ಸಿಂಹ ಹಾಗೂ ಆರೋಗ್ಯ ಸಚಿವ ಬಿ. ಶ್ರೀರಾಮುಲು ಪೋಷಕರಿಗೆ ಸಾಂತ್ವನ ಹೇಳಿದರು.

ಮೈಸೂರು: ಅಮೆರಿಕಾದಲ್ಲಿ ಅಪರಿಚತರ ಗುಂಡಿನ ದಾಳಿಗೆ ಬಲಿಯಾದ ಮೈಸೂರು ಯುವಕ ಅಭಿಷೇಕ್ ಅವರ ನಿವಾಸಕ್ಕೆ ಭೇಟಿ ನೀಡಿದ ಸಂಸದ ಪ್ರತಾಪ್ ಸಿಂಹ ಹಾಗೂ ಆರೋಗ್ಯ ಸಚಿವ ಬಿ. ಶ್ರೀರಾಮುಲು ಪೋಷಕರಿಗೆ ಸಾಂತ್ವನ ಹೇಳಿದರು.
ಈ ವೇಳೆ ಅಮೆರಿಕಾಕ್ಕೆ ತೆರಳಲು ವೀಸಾ ಸಮಸ್ಯೆ ನಿವಾರಣೆಗೆ ಸಹಾಯ ಮಾಡುವುದಾಗಿ ಸಚಿವ ಶ್ರೀರಾಮುಲು ಅವರು ತಿಳಿಸಿದರು.
ಬಳಿಕ ಮಾತನಾಡಿ ಪ್ರತಾಪ್ ಸಿಂಹ ಅವರು, ಅಭಿಷೇಕ್ ಕುಟುಂಬ ಅಮೆರಿಕಾಕ್ಕೆ ತೆರಳಲು ವೀಸಾ ಸಮಸ್ಯೆ ಉಂಟಾಗಿದೆ. ಇನ್ನೆರಡು ದಿನಗಳಲ್ಲಿ ವೀಸಾ ವ್ಯವಸ್ಥೆ ಮಾಡಿಕೊಡಲಾಗುವುದು. ಈ ಬಗ್ಗೆ ಅಮೆರಿಕಾ ರಾಯಭಾರಿ ಕಚೇರಿಯೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಹೇಳಿದರು.
ಸಚಿವ ಶ್ರೀರಾಮುಲು ಮಾತನಾಡಿ, ನಮ್ಮ ದೇಶದಲ್ಲಿಯೇ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳಿವೆ. ಆದರೆ, ಸಾಕಷ್ಟು ಜನರು ವಿದೇಶಕ್ಕೆ ತೆರಳಿ ವಿದ್ಯಾಭ್ಯಾಸ ಮಾಡಲು ಇಚ್ಛಿಸುತ್ತಿದ್ದಾರೆ. ಅಭಿಷೇಕ್ ಸಾವಿಗೆ ಸಂತಾಪ ಸೂಚಿಸುತ್ತೇನೆ. ಅಭಿಷೇಕ್ ಕುಟುಂಬದ ಜೊತೆಗೆ ನಿಲ್ಲುತ್ತೇನೆಂದು ತಿಳಿಸಿದ್ದಾರೆ.
ಅಭಿಷೇಕ್ ತಂದೆ ಸುದೇಶ್ ಮಾತನಾಡಿ, ನನ್ನ ಪುತ್ರನಿಗೆ ಯಾವುದೇ ಕೆಟ್ಟ ಅಭ್ಯಾಸಗಳಿರಲಿಲ್ಲ. ವಿದ್ಯಾಭ್ಯಾಸ ಮಾಡುತ್ತಿರುವಾಗಲೇ ದುಡಿಯುವ ಆಸೆಯಿಟ್ಟಿಕೊಂಡಿದ್ದ. ಅಮೆರಿಕಾದಲ್ಲಿ ಮೂರು ವಾರಗಳನ್ನು ಕಳೆದು ಹಿಂದಿರುಗಿದ್ದೆ. ಜನವರಿಯಲ್ಲಿ ತಾಯಿ ಕೂಡ ಅಮೆರಿಕಾಗೆ ಹೋಗಲು ಬಯಸಿದ್ದರು. ಇಂತಹ ಪರಿಸ್ಥಿತಿ ಯಾವುದೇ ಪೋಷಕರಿಗೂ ಬಾರದಿರಲಿ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


