ರಾಮನಗರ: ರಕ್ಕಸ ಬೀದಿ ನಾಯಿಗಳ ದಾಳಿಯಿಂದ 9 ಜನರಿಗೆ ಗಾಯ
ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ರಕ್ಕಸ ಬೀದಿ ನಾಯಿಗಳ ದಾಳಿಯಿಂದಾಗಿ ಇಬ್ಬರು ಅಪ್ರಾಪ್ತರು ಸೇರಿದಂತೆ 9 ಮಂದಿ ಗಾಯಗೊಂಡಿದ್ದಾರೆ. ಗುಡೇಮಾರನಹಳ್ಳಿ ಸರ್ಕಲ್ ಹಾಗೂ ಮಾಗಡಿಯ ನಂಜಪ್ಪ ಸರ್ಕಲ್ ನಲ್ಲಿ ಬೀದಿನಾಯಿಗಳು ಜನರನ್ನು ಕಚ್ಚಿವೆ. ಇದರಿಂದಾ ಆಕ್ರೋಶಗೊಂಡ ಜನರು ಅವರನ್ನು ಬೆನ್ನಟ್ಟಿ ಕೊಂದು ಹಾಕಿದ್ದಾರೆ.

ರಾಮನಗರ: ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ರಕ್ಕಸ ಬೀದಿ ನಾಯಿಗಳ ದಾಳಿಯಿಂದಾಗಿ ಇಬ್ಬರು ಅಪ್ರಾಪ್ತರು ಸೇರಿದಂತೆ 9 ಮಂದಿ ಗಾಯಗೊಂಡಿದ್ದಾರೆ. ಗುಡೇಮಾರನಹಳ್ಳಿ ಸರ್ಕಲ್ ಹಾಗೂ ಮಾಗಡಿಯ ನಂಜಪ್ಪ ಸರ್ಕಲ್ ನಲ್ಲಿ ಬೀದಿನಾಯಿಗಳು ಜನರನ್ನು ಕಚ್ಚಿವೆ. ಇದರಿಂದಾ ಆಕ್ರೋಶಗೊಂಡ ಜನರು ಅವರನ್ನು ಬೆನ್ನಟ್ಟಿ ಕೊಂದು ಹಾಕಿದ್ದಾರೆ.
ನಾಯಿಗಳ ದಾಳಿಯಿಂದ ಗಾಯಗೊಂಡಿರುವ ಐದು ವರ್ಷದ ನಂದಕಿಶೋರ್ ಎಂಬ ಬಾಲಕನ ಪರಿಸ್ಥಿತಿ ಗಂಭೀರವಾಗಿತ್ತು. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕ ಆತನ ಆರೋಗ್ಯದಲ್ಲಿ ಚೇತರಿಕೆಯಾಗಿದೆ. ಸರ್ಕಾರಿ ಕಾಲೇಜ್ ಆವರಣದಲ್ಲಿ 16 ವರ್ಷದ ಭೂಮಿಕಾ ಎಂಬ ಮತ್ತೊಬ್ಬ ಯುವತಿ ಮೇಲೆ ನಾಯಿಗಳು ದಾಳಿ ನಡೆಸಿವೆ. ನಂತರ ಆಕೆಯನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂಬುದು ತಿಳಿದುಬಂದಿದೆ.
ಪದೇ ಪದೇ ಬೀದಿ ನಾಯಿಗಳು ದಾಳಿ ಮಾಡುತ್ತಿರುವುದನ್ನು ಖಂಡಿಸಿ ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸಿ ಪುರಸಭೆಯ ಅಧಿಕಾರಿಗಳ ಗಮನಕ್ಕೆ ತಂದರು. ಕೆಲವರು ಬೀದಿನಾಯಿಗಳನ್ನು ಅಟ್ಟಾಡಿಸುವ ಮೂಲಕ ಹತ್ಯೆ ಮಾಡಿದ್ದಾರೆ.
ಮಾಗಡಿಯಲ್ಲಿ ಇಂತಹ ದಾಳಿಗಳು ನಡೆಯುತ್ತಲೇ ಇವೆ. ಆದರೆ, ತಡೆಗಟ್ಟಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇತ್ತೀಚಿಗೆ ಅಪ್ರಾಪ್ತ ಬಾಲಕಿ ನಾಯಿ ದಾಳಿಯಿಂದ ಮೃತಪಟ್ಟಿದ್ದರೂ ಪೊಲೀಸರು ಕ್ರಮ ಕೈಗೊಂಡಿಲ್ಲ. ಆದಾಗ್ಯೂ, ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುವುದಾಗಿ ಪುರಸಭೆ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಗಾಯಾಳು 14 ವರ್ಷದ ನಂಜಪ್ಪ ಹೇಳಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


