'ಹಿಂದೂ ಯುವತಿಯರನ್ನು ಸಿಕ್ಕಲ್ಲಿ ಅತ್ಯಾಚಾರ ಮಾಡಿ ಪೆಟ್ರೋಲ್ ಸುರಿದು ಸುಟ್ಟಾಕಿ': ಫೇಸ್ ಬುಕ್ ಪೋಸ್ಟ್ ಹಾಕಿದವನ ಬಂಧನ
ತೆಲಂಗಾಣದಲ್ಲಿ ಪ್ರಿಯಾಂಕ ರೆಡ್ಡಿ ಅತ್ಯಾಚಾರ, ಕೊಲೆ ಪ್ರಕರಣದ ಅಪರಾಧಿಗಳಿಗೆ ಸಾರ್ವಜನಿಕವಾಗಿ ಶಿಕ್ಷೆ ವಿಧಿಸುವಂತೆ ಆಗ್ರಹ ಹೆಚ್ಚುತ್ತಿದೆ.

ಹಾವೇರಿ: ತೆಲಂಗಾಣದಲ್ಲಿ ಪ್ರಿಯಾಂಕ ರೆಡ್ಡಿ ಅತ್ಯಾಚಾರ, ಕೊಲೆ ಪ್ರಕರಣದ ಅಪರಾಧಿಗಳಿಗೆ ಸಾರ್ವಜನಿಕವಾಗಿ ಶಿಕ್ಷೆ ವಿಧಿಸುವಂತೆ ಆಗ್ರಹ ಹೆಚ್ಚುತ್ತಿದೆ. ಈ ಬೆನ್ನಲ್ಲೇ ಮತ್ತೊಂದು ವಿವಾದ ಉಂಟಾಗಿದ್ದು, ಹಿಂದೂ ಯುವತಿಯರನ್ನು ಸಿಕ್ಕಲ್ಲಿ ಅತ್ಯಾಚಾರ ಮಾಡಿ ಪೆಟ್ರೋಲ್ ಸುರಿದು ಸುಟ್ಟಾಕಿ ಎಂದು ಫೇಸ್ ಬುಕ್ ನಲ್ಲಿ ಸಲೀಂ ಅಹ್ಮದ್ ಎಂಬ ವ್ಯಕ್ತಿ ಕರೆ ನೀಡಿದ್ದಾನೆ.
ಈ ಸಲೀಂ ಅಹ್ಮದ್ ಹಾವೇರಿಯ ಜಿಲ್ಲೆಯವನಾಗಿದ್ದು, ಹಿಂದೂ ಯುವತಿಯರನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡುವ ಪೋಸ್ಟ್ ಹಾಕಿದ ಬೆನ್ನಲ್ಲೇ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಸಲೀಂ ಅಹ್ಮದ್ ಪೋಸ್ಟ್ ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕೆಲವು ಸಂಘಟನೆಗಳು ಇದನ್ನು ಗುರುತಿಸಿ ಈ ಕಿಡಿಗೇಡಿಯ ಬಂಧನಕ್ಕೆ ಆಗ್ರಹಿಸಿದ್ದವು.
ಪೋಸ್ಟ್ ಹಾಕಿದ್ದ ಕೆಲವೇ ಗಂಟೆಗಳಲ್ಲಿ ಹಾವೇರಿಯ ಹಂಸಭಾವಿ ಪೊಲೀಸರು ಈತನನ್ನು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


