ರಾಜ್ಯ

ಗಂಗಾವತಿ: ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಆರೋಪಿಗಳು ಅಂದರ್

ವ್ಯಕ್ತಿಯನ್ನು ಅಪಹರಿಸಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಜಂಗಮರ ಕಲ್ಗುಡಿ ಗ್ರಾಮದ ಓರ್ವ ಸೇರಿದಂತೆ ಇಬ್ಬರು ಆರೋಪಿಗಳನ್ನು ಕೊಪ್ಪಳ

ಗಂಗಾವತಿ: ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಆರೋಪಿಗಳು ಅಂದರ್
ಸಂಗ್ರಹ ಚಿತ್ರ
Published On :

ಗಂಗಾವತಿ: ವ್ಯಕ್ತಿಯನ್ನು ಅಪಹರಿಸಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಜಂಗಮರ ಕಲ್ಗುಡಿ ಗ್ರಾಮದ ಓರ್ವ ಸೇರಿದಂತೆ ಇಬ್ಬರು ಆರೋಪಿಗಳನ್ನು ಕೊಪ್ಪಳ ಜಿಲ್ಲೆಯ ಹನುಮಸಾಗರ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಜಿಲ್ಲೆಯ ಕುಷ್ಟಗಿ ತಾಲೂಕಿನ ನಿಲೋಗಲ್ ಗ್ರಾಮದ ಪರಸಪ್ಪ ಕೊತಬಾಳ ಎಂಬ ವ್ಯಕ್ತಿಯನ್ನು ಗಂಗಾವತಿ ತಾಲೂಕಿನ ಜಂಗಮರ ಕಲ್ಗುಡಿಯ ನಾಗೇಶ್ವರರಾವ್ ನೆಕ್ಕಂಟಿ, ಹಾಗೂ ಕಲಬುರ್ಗಿ ಮೂಲದ ರಾಘವೇಂದ್ರ ಹೂಗಾರ ಎಂಬಿಬ್ಬರು ಅಪಹರಿಸಿದ್ದರು. ಅಪಹರಣಕ್ಕೊಳಗಾದ ಪರಸಪ್ಪ ಅವರ ಮಗನಿಗೆ ಆರೋಪಿಗಳು ಫೋನ್ ಮಾಡಿ ಒಂದು ಲಕ್ಷ ರುಪಾಯಿ ಹಣದ ಬೇಡಿಕೆ ಇಟ್ಟಿದ್ದರು. ಈ ಕುರಿತಂತೆ ಪರಸಪ್ಪ ಅವರ ಮಗ ಹನುಮಸಾಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕುಷ್ಟಗಿ ಸಿಪಿಐ ಚಂದ್ರಶೇಖರ್,  ಹನಮಸಾಗರ ಠಾಣೆಯ ಪಿಎಸ್ಐ ಅಮರೇಶ ಹುಬ್ಬಳ್ಳಿ ಹಾಗೂ ಸಿಬ್ಬಂದಿ ತಂಡ ಆರೋಪಿಗಳನ್ನು 24 ಗಂಟೆಗಳಲ್ಲಿ ಜಿಲ್ಲೆಯ ಕಾರಟಗಿ ಬಳಿ ಬಂಧಿಸಿದ್ದಾರೆ. ಅಲ್ಲದೆ ಅಪಹರಣಕ್ಕೊಳಗಾಗಿದ್ದ ಪರಸಪ್ಪರನ್ನು ರಕ್ಷಿಸಿದ್ದಾರೆ. 

ಬಂಧಿತರಿಂದ ಇಂಡಿಕಾ ಕಾರ್, ಕಬ್ಬಿಣದ ಪೈಪ್, ಕಬ್ಬಿಣದ ಚೈನ್, ಹಗ್ಗ, ಎರಡು ಮೊಬೈಲ್,  ಕಬ್ಬಿಣದ ಜಾಲದ ಲಿವಿರ್ ವಶಪಡಿಸಿಕೊಳ್ಳಲಾಗಿದೆ..

ವರದಿ: ಎಂಜೆ ಶ್ರೀನಿವಾಸ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.