ರಾಜ್ಯ

85ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಎಚ್ ಎಸ್ ವೆಂಕಟೇಶಮೂರ್ತಿ ಆಯ್ಕೆ

ಕಲಬುರಗಿಯಲ್ಲಿ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ಎಚ್.ಎಚ್. ವೆಂಕಟೇಶಮೂರ್ತಿ ಅವರು ಆಯ್ಕೆಯಾಗಿದ್ದಾರೆ.

85ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಎಚ್ ಎಸ್ ವೆಂಕಟೇಶಮೂರ್ತಿ ಆಯ್ಕೆ
ಎಚ್ ಎಸ್ ವೆಂಕಟೇಶಮೂರ್ತಿ
Published On :

ಬೆಂಗಳೂರು: ಕಲಬುರಗಿಯಲ್ಲಿ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ಎಚ್.ಎಚ್. ವೆಂಕಟೇಶಮೂರ್ತಿ ಅವರು ಆಯ್ಕೆಯಾಗಿದ್ದಾರೆ.

ಈ ಸಂಬಂಧ ಬುಧವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಅವರು ತಿಳಿಸಿದ್ದಾರೆ.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮನು ಬಳಿಗಾರ್ ಅವರು, ಮುಂದಿನ ವರ್ಷ ಫೆಬ್ರವರಿ 5, 6 ಮತ್ತು 7ರಂದು ಕಲಬುರಗಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಎಚ್ಎಸ್ ವಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದರು.

ಸದ್ಯ ಬೆಂಗಳೂರಿನಲ್ಲಿ ನೆಲಸಿರುವ, ಕನ್ನಡದ ಪ್ರಮುಖ ಕವಿ, ಕಥೆಗಾರ, ನಾಟಕಕಾರ ಡಾ ಎಚ್ ಎಸ್ ವೆಂಕಟೇಶಮೂರ್ತಿ ಅವರು ಮೂಲತಃ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊದಿಗೆರೆ ಗ್ರಾಮದವರು.

1987ರ ನಂತರ ಕಲಬುರ್ಗಿಗೆ ಸಮ್ಮೇಳನ ಆತಿಥ್ಯ ವಹಿಸುವ ಅವಕಾಶ ದೊರೆತಿದ್ದು, 31 ವರ್ಷಗಳ ನಂತರ ಅಕ್ಷರ ಜಾತ್ರೆಗೆ ಶರಣರ ನಾಡು ಸಜ್ಜಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.