ಬೀದರ್ : ಏಕಾಏಕೀ ಹೊತ್ತಿ ಉರಿದ ಕಾರು, ಮಹಿಳೆ ಸಜೀವ ದಹನ
ನಡು ರಸ್ತೆಯಲ್ಲೇ ಕಾರೊಂದು ಹೊತ್ತಿ ಉರಿದ ಪರಿಣಾಮ ಮಹಿಳೆಯೊಬ್ಬರು ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಹುಮನಾಬಾದ್ ತಾಲೂಕಿನ ನಿರ್ಣಾ ಕ್ರಾಸ್ ಬಳಿ ಗುರುವಾರ ಬೆಳಗ್ಗೆ ನಡೆದಿದೆ.

ಬೀದರ್: ನಡು ರಸ್ತೆಯಲ್ಲೇ ಕಾರೊಂದು ಹೊತ್ತಿ ಉರಿದ ಪರಿಣಾಮ ಮಹಿಳೆಯೊಬ್ಬರು ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಹುಮನಾಬಾದ್ ತಾಲೂಕಿನ ನಿರ್ಣಾ ಕ್ರಾಸ್ ಬಳಿ ಗುರುವಾರ ಬೆಳಗ್ಗೆ ನಡೆದಿದೆ.
ಏಕಾಏಕಿ ಕಾರಿನ ಹಿಂಬದಿಯ ಎಸಿ ಬಿಸಿಯಾಗಿ ಸ್ಫೋಟಗೊಂಡ ಪರಿಣಾಮ ಕಾರು ಹೊತ್ತಿ ಉರಿದು ಮಹಿಳೆ ಸಜೀವ ದಹನವಾದ ಹೃದಯ ವಿದ್ರಾವಕ ಘಟನೆ ಬೀದರ್ ನಲ್ಲಿ ನಡೆದಿದೆ.
ಕಾರಿಗೆ ಬೆಂಕಿ ತಗುಲಿದ ಗಲಿಬಿಲಿಯಲ್ಲಿ ಸೀಟ್ ಬೆಲ್ಟ್ ತೆಗೆಯಲಾಗದೆ ಕಾರಿನಲ್ಲೆ 42 ವರ್ಷದ ಕಲ್ಯಾಣಿ ಎಂಬ ಮಹಿಳೆ ಸಜೀವ ದಹನವಾಗಿರುವ ಘಟನೆ ನಡೆದಿದೆ.
ಒಂದೇ ಕುಟುಂಬದ ನಾಲ್ಕು ಜನ ಕಾರಿನಲ್ಲಿ ಇಂದು ಬೆಳಗಿನ ಜಾವ ಮಹಾರಾಷ್ಟ್ರ ಉದಗೀರ್ ನಿಂದ ಹೈದ್ರಾಬಾದ್ ಗೆ ತೆರಳುತ್ತಿರುವಾಗ ಈ ಘಟನೆ ನಡೆದಿದೆ. ಪತಿ ಉದಯ ಕುಮಾರ್ ಹಾಗೂ ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


