ಪೊಕ್ಸೊ ಪ್ರಕರಣದಲ್ಲಿ ಅತ್ಯಾಚಾರ ಆರೋಪಿಗೆ 10 ವರ್ಷ ಜೈಲು ಶಿಕ್ಷೆ
17 ವರ್ಷದ ಹುಡುಗಿ ಮೇಲೆ ಅತ್ಯಾಚಾರವೆಸಗಿದ 28 ವರ್ಷದ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 5 ಸಾವಿರ ದಂಡವನ್ನು ವಿಧಿಸಿ ನಗರದ ಮಕ್ಕಳ ಸ್ನೇಹಿ ನ್ಯಾಯಾಲಯವೊಂದರ ನ್ಯಾಯಾಧೀಶೆ ಆರ್ . ಶಾರದಾ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: 17 ವರ್ಷದ ಹುಡುಗಿ ಮೇಲೆ ಅತ್ಯಾಚಾರವೆಸಗಿದ 28 ವರ್ಷದ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 5 ಸಾವಿರ ದಂಡವನ್ನು ವಿಧಿಸಿ ನಗರದ ಮಕ್ಕಳ ಸ್ನೇಹಿ ನ್ಯಾಯಾಲಯವೊಂದರ ನ್ಯಾಯಾಧೀಶೆ ಆರ್ . ಶಾರದಾ ಆದೇಶ ಹೊರಡಿಸಿದ್ದಾರೆ.
ಮೂಲತ: ಮಂಡ್ಯದಿಂದ ಬಂದು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದ ಹೆಚ್. ಎಸ್. ಮಹೇಶ್ ಶಿಕ್ಷೆಗೊಳಗಾಗದ ಆರೋಪಿಯಾಗಿದ್ದಾನೆ.
2014 ಏಪ್ರಿಲ್ 24 ರಂದು ಅತ್ಯಾಚಾರ ಘಟನೆ ನಡೆದಿತ್ತು. ಸೊಳ್ಳೆ ಪರದೆ ತಯಾರಿಕಾ ಕಂಪನಿಯಲ್ಲಿ ತನ್ನೊಂದಿಗೆ ಕೆಲಸ ಮಾಡುತ್ತಿದ್ದ ಮಹೇಶ್ ತನ್ನ ಮಗಳ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿ ಸಂತ್ರಸ್ತೆಯ ತಾಯಿ ದೂರು ದಾಖಲಿಸಿದ್ದಳು.
ಏಪ್ರಿಲ್ 24 ರಂದು ಸಂತ್ರಸ್ಥೆಯ ತಾಯಿ ಕೆಲಸಕ್ಕೆ ಹೋಗಿದ್ದಾಗ ಮನೆ ಹತ್ತಿರ ಬಂದ ಆರೋಪಿ ಮಹೇಶ್ , ಸಂತ್ರಸ್ತೆಯನ್ನು ನೆರೆಯ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಿದ್ದ. ಅಲ್ಲದೇ, ಇದನ್ನು ಯಾರಿಗೂ ಹೇಳದಂತೆ ಬೆದರಿಕೆ ವೊಡ್ಡಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.
ಮೇ 5, 2014ರಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗದ ಬಂಧನಕ್ಕೆ ಒಪ್ಪಿಸಲಾಗಿತ್ತು. ತನಿಖೆ ನಂತರ ಐಪಿಸಿ ಹಾಗೂ ಪೊಕ್ಸೊ ಕಾಯ್ದೆಯಡಿ ಕಾಮಾಕ್ಷಿಪಾಳ್ಯ ಪೊಲೀಸರು ಆರೋಪಿ ವಿರುದ್ಧ ಜಾರ್ಜ್ ಶೀಟ್ ದಾಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


