ಚಿನ್ನಾಭರಣ ಕಳ್ಳನ ಬಂಧನ: ದೋಚಿದ್ದ ಚಿನ್ನದ ಮೌಲ್ಯವೆಷ್ಟು ಗೊತ್ತೇ?
ಜಿಲ್ಲೆಯ ಕೊಣ್ಣೂರ ಮತ್ತು ಮುಧೋಳ ಶಹರದಲ್ಲಿ ನಡೆದ ಕಳ್ಳತನ ಆರೋಪದಡಿ ಲೋಕೇಶ ರಾವಸಾಬ ಸುತಾರ ಎಂಬ ಆರೋಪಿಯನ್ನು ಬಂಧಿಸಿ ಅಪಾರ ಪ್ರಮಾಣದ ಚಿನ್ನ ಹಾಗೂ ಬೆಳ್ಳಿ ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಲೋಕೇಶ ಜಗಲಾಸರ ತಿಳಿಸಿದ್ದಾರೆ.

ಬಾಗಲಕೋಟೆ: ಜಿಲ್ಲೆಯ ಕೊಣ್ಣೂರ ಮತ್ತು ಮುಧೋಳ ಶಹರದಲ್ಲಿ ನಡೆದ ಕಳ್ಳತನ ಆರೋಪದಡಿ ಲೋಕೇಶ ರಾವಸಾಬ ಸುತಾರ ಎಂಬ ಆರೋಪಿಯನ್ನು ಬಂಧಿಸಿ ಅಪಾರ ಪ್ರಮಾಣದ ಚಿನ್ನ ಹಾಗೂ ಬೆಳ್ಳಿ ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಲೋಕೇಶ ಜಗಲಾಸರ ತಿಳಿಸಿದ್ದಾರೆ.
ಮಿರಜ ತಾಲೂಕಿನ ಲಿಂಗನೂರು ಗ್ರಾಮದ ಲೋಕೇಶ ಸುತಾರನ್ನು ಮಂಗಳವಾರ ದಸ್ತಗಿರಿ ಮಾಡಿ ಆರೋಪಿಯಿಂದ ಒಟ್ಟು 10 ಪ್ರಕರಣಗಳಲ್ಲಿ ಕಳ್ಳತನ ಮಾಡಿದ ಸುಮಾರು 501.5 ಗ್ರಾಂ ಚಿನ್ನಾಭರಣ ಹಾಗೂ 690ಗ್ರಾಂ ಬೆಳ್ಳಿಯ ಆಭರಣಗಳು ಮತ್ತು ಕಳ್ಳತನ ಮಾಡಲು ಉಪಯೋಗಿಸಿದ ಒಂದು ಹೋಂಡಾ ಆಕರ್ಡ ಕಾರ ಹಾಗೂ ರಾಯಲ್ ಎನ್‌ಫೀಲ್ಡ್ ಬುಲೋಟ್ ವಶಪಡಿಸಿಕೊಂಡು ತನಿಖೆ ಕೈಗೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


