ಬೆಂಗಳೂರು: ಯುವತಿಯ ಸರ ಕಿತ್ತು ಪರಾರಿಯಾಗುತ್ತಿದ್ದ ಕಳ್ಳನ ಬೈಕ್‍ಗೆ ಗುದ್ದಿ ಹಿಡಿದ ಆಟೋ ಚಾಲಕ, ವಿಡಿಯೋ ವೈರಲ್!
ಒಂಟಿಯಾಗಿ ಹೋಗುತ್ತಿದ್ದ ಮಹಿಳೆಯ ಚಿನ್ನದ ಸರ ಕಿತ್ತುಕೊಂಡು ಹೋಗುತ್ತಿದ್ದ ಕಳ್ಳನನ್ನು ಗಮನಿಸಿದ ಆಟೋ ಚಾಲಕ ಬೈಕ್‍ಗೆ ಡಿಕ್ಕಿ ಹೊಡೆಸಿ ನಂತರ ಆತನನ್ನು ಹಿಡಿದು ಚೆನ್ನಾಗಿ ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಮಾರತ್ ಹಳ್ಳಿಯಲ್ಲಿ ನಡೆದಿದೆ.

ಬೆಂಗಳೂರು: ಒಂಟಿಯಾಗಿ ಹೋಗುತ್ತಿದ್ದ ಮಹಿಳೆಯ ಚಿನ್ನದ ಸರ ಕಿತ್ತುಕೊಂಡು ಹೋಗುತ್ತಿದ್ದ ಕಳ್ಳನನ್ನು ಗಮನಿಸಿದ ಆಟೋ ಚಾಲಕ ಬೈಕ್‍ಗೆ ಡಿಕ್ಕಿ ಹೊಡೆಸಿ ನಂತರ ಆತನನ್ನು ಹಿಡಿದು ಚೆನ್ನಾಗಿ ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಮಾರತ್ ಹಳ್ಳಿಯಲ್ಲಿ ನಡೆದಿದೆ.
ಮಾರತ್ ಹಳ್ಳಿಯ ಮ್ಯಾಕ್ಸ್ ಶೋ ರೂಂ ಎದುರು ಯುವತಿಯೋರ್ವಳು ನಡೆದುಕೊಂಡು ಹೋಗುತ್ತಿದ್ದನ್ನು ಗಮನಿಸಿದ ಸರಗಳ್ಳ ಆಕೆಯ ಕುತ್ತಿಗೆಗೆ ಕೈ ಹಾಕಿ ಸರ ಕಿತ್ತುಕೊಂಡಿದ್ದಾನೆ. ಕೂಡಲೇ ಯುವತಿ ಕಿರುಚಿಕೊಂಡು ಆತನನ್ನು ಹಿಂಬಾಲಿಸಿದ್ದಾಳೆ. ಇದನ್ನು ಗಮನಿಸಿದ ಆಟೋ ಚಾಲಕ ಬೈಕ್ ಗೆ ಡಿಕ್ಕಿ ಹೊಡೆದು ಆತನನ್ನು ಬೀಳಿಸಿ ಹಿಡಿದು ಥಳಿಸಿದ್ದಾರೆ.
ನಂತರ ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಇನ್ನು ಆಟೋ ಚಾಲಕ ಹನುಮಂತನ ಸಾಹಸ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹನುಮಂತನ ಸಾಹವನ್ನು ಪ್ರಶಂಸಿಸಿದ ವೈಟ್ ಫೀಲ್ಡ್ ಡಿಸಿಪಿ ಅನುಚೇತ್ ಆಟೋ ಚಾಲಕನಿಗೆ ಹತ್ತು ಸಾವಿರ ಬಹುಮಾನ ನೀಡಿ ಅಭಿನಂದಿಸಿದ್ದಾರೆ. ಆರೋಪಿಯನ್ನು ಕೆಜಿ ಹಳ್ಳಿಯ ವಿಘ್ನೇಶ್ ಎಂದು ಗುರುತಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


