ಬೆಂಗಳೂರಿನಲ್ಲಿ ದಾಳಿಗೆ ಸಂಚು: ಉಗ್ರ ಇಮ್ರಾನ್ ಜೀವಾವಧಿ ಶಿಕ್ಷೆ ಎತ್ತಿ ಹಿಡಿದ ಹೈಕೋರ್ಟ್
ವಿಧಾನ ಸೌಧ, ಎಚ್ಎಎಲ್, ವಿಪ್ರೋ, ಇನ್ಪೋಸಿಸ್ ಸೇರಿ ನಗರದ ಪ್ರಮುಖ ಐಟಿ ಕಂಪನಿಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆ ಸದಸ್ಯ ಇಮ್ರಾನ್ ಜಲಾಲ್ಗೆ ನೀಡಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ಬೆಂಗಳೂರು: ವಿಧಾನ ಸೌಧ, ಎಚ್ಎಎಲ್, ವಿಪ್ರೋ, ಇನ್ಪೋಸಿಸ್ ಸೇರಿ ನಗರದ ಪ್ರಮುಖ ಐಟಿ ಕಂಪನಿಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆ ಸದಸ್ಯ ಇಮ್ರಾನ್ ಜಲಾಲ್ಗೆ ನೀಡಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ಉಗ್ರ ಇಮ್ರಾನ್ ಗೆ ಬೆಂಗಳೂರಿನ 55ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇಮ್ರಾನ್ ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.
ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಮಳಿಮಠ ಹಾಗೂ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಜೀವಾವಧಿ ಶಿಕ್ಷೆಯನ್ನು ಕಾಯಂಗೊಳಿಸಿದೆ.
ಆರೋಪಿಯು ಶಸ್ತ್ರ, ಜೀವಂತ ಗುಂಡು ಮತ್ತು ಗ್ರೆನೇಡ್ಗಳೊಂದಿಗೆ ಸಿಕ್ಕಿಬಿದ್ದಿದ್ದಾನೆ. ಭಯೋತ್ಪಾದನೆ ಕೃತ್ಯ ಎಸಗಲೆಂದೇ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಎಂಬುದನ್ನು ಸಾಕ್ಷ್ಯಾಧಾರಗಳ ಸಮೇತ ಪ್ರಾಸಿಕ್ಯೂಷನ್ ಸಾಬೀತುಪಡಿಸಿದೆ.
ತನ್ನನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂಬ ಆರೋಪಿ ವಾದಕ್ಕೆ ದಾಖಲೆಗಳು ಇಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


